Mysore
30
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ವಯನಾಡು-ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಬಂದ್‌

ಚಾಮರಾಜನಗರ: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಂಡೀಪುರ ಅರಣ್ಯ ಪ್ರದೇಶಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದೆ.

ಬಂಡೀಪುರಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿರುವ ಪರಿಣಾಮ ಕೇರಳದ ವಯನಾಡು-ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಬಂದ್‌ ಆಗಿದೆ.

ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ಮಳೆ ಜಾಸ್ತಿಯಾದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಕೇರಳದಲ್ಲಿ ಮಳೆ ಇನ್ನೂ ಜಾಸ್ತಿಯಾದರೆ ಬಂಡೀಪುರ ಅರಣ್ಯ ವ್ಯಾಪ್ತಿಯ ಮುತ್ತಂಗ ಬಳಿ ಹೆದ್ದಾರಿ ಮೇಲೆಯೇ ಅಪಾರ ಪ್ರಮಾಣದ ನೀರು ಹರಿಯಲಿದೆ.

ಈಗಾಗಲೇ ರಸ್ತೆ ಸಂಪರ್ಕ ಕಡಿತವಾಗಿದ್ದು, ವಾಹನ ಸವಾರರಿಗೆ ಬದಲಿ ರಸ್ತೆ ವ್ಯವಸ್ಥೆ ಮಾಡಲಾಗಿದೆ. ಮಳೆ ಮುಂದುವರಿದರೆ ಇನ್ನೂ ಹೆಚ್ಚಿನ ಅನಾಹುತ ಸಂಭವಿಸಲಿದೆ ಎನ್ನಲಾಗಿದೆ.

Tags:
error: Content is protected !!