Mysore
25
mist

Social Media

ಶನಿವಾರ, 19 ಅಕ್ಟೋಬರ್ 2024
Light
Dark

ನ.1ರಂದು ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ

ಚಾಮರಾಜನಗರ : ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಹಾಗೂ ಅಕ್ಟೋಬರ್ 28ರಂದು ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠಗಾಯನ ವಿಶಿಷ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲುತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡರಾಜ್ಯೋತ್ಸವ ಆಚರಣೆ ಕಾರ್ಯಕ್ರಮಕುರಿತ ಪೂರ್ವಭಾವಿ ಸಭೆಯಲ್ಲಿ ಈ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಯಿತು.
ನವೆಂಬರ್ 1ರಂದು ಕರ್ನಾಟಕರಾಜ್ಯೋತ್ಸವ ಹಾಗೂ ಇನ್ನೂ ಹೆಚ್ಚಿನ ಸಂಭ್ರಮಉತ್ಸಾಹದಿಂದ ರಾಜ್ಯೋತ್ಸವವನ್ನುಆಚರಿಸುವ ಹಿನ್ನೆಲೆಯಲ್ಲಿ ನಾಡು, ನುಡಿ, ಪರಂಪರೆ ಬಗ್ಗೆ ಅಭಿಮಾನ, ಹೆಮ್ಮೆ ಮೂಡಿಸುವಕನ್ನಡಗೀತ ಕವನಗಳ ಗಾಯನವನ್ನು ಕೋಟಿಕಂಠ ಗಾಯನ ಕಾರ್ಯಕ್ರಮದಡಿ ರಾಜ್ಯಾದ್ಯಂತ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆಆಯೋಜಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲೂ ಅಕ್ಟೋಬರ್ 28ರಂದು ಗ್ರಾಮ ಗ್ರಾಮಗಳಲ್ಲಿ ಸಂಘ-ಸಂಸ್ಥೆ, ಶಾಲಾ-ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧೆಡೆ ಹೆಚ್ಚು ಜನ ಏಕ ಕಂಠದಲ್ಲಿಆಯ್ದ 6 ಕನ್ನಡ ಹಾಡುಗಳ ಗಾಯನ ನಡೆಸಲುಯೋಜಿಸಲಾಗಿದೆ. ಜಿಲ್ಲಾಕೇಂದ್ರದಲ್ಲಿಯೂ ಹೆಚ್ಚು ಜನರನ್ನು ಒಳಗೊಂಡಂತೆ ಈ ಸಮೂಹ ಗಾಯನಕಾರ್ಯಕ್ರಮಆಯೋಜಿಸಲಾಗುತ್ತಿದೆಎಂದು ಸಭೆಯಆರಂಭದಲ್ಲಿ ವಿವರಿಸಲಾಯಿತು.
ಸಭೆಯಲ್ಲಿಕನ್ನಡ ಪರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ಜಿಲ್ಲಾಡಳಿತದಿಂದ ಆಚರಿಸಲಾಗುವಎಲ್ಲಾ ಕಾರ್ಯಕ್ರಮಗಳಿಗೆ ಸಂಘಟನೆಗಳು ಈ ಹಿಂದಿನಿಂದಲೂ ಸಹಕಾರ ನೀಡುತ್ತಾ ಬಂದಿವೆ. ಆದರೆ ಕಳೆದ ಚಾಮರಾಜನಗರದಸರಾ ಮಹೋತ್ಸವ ಸಂದರ್ಭದಲ್ಲಿ ಸಂಘಟನೆಗಳನ್ನು ಕಡೆಗಣಿಸಲಾಗಿದೆ. ವಿಳಂಬವಾಗಿ ದಸರಾ ಸಮಿತಿಗಳಿಗೆ ಸಂಘಟನೆಯ ಪ್ರತಿನಿಧಿಗಳನ್ನು ಸೇರ್ಪಡೆ ಮಾಡಲಾಯಿತು. ಇನ್ನು ಮುಂದೆಇಂತಹ ನಿರ್ಲಕ್ಷ್ಯಧೋರಣೆ ಸಹಿಸುವುದಿಲ್ಲ ಎಂದುಅಸಮಧಾನ ವ್ಯಕ್ತಪಡಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ