ಹನೂರು : ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಅಳವಡಿಸಿರುವ ಹೈ ಮಾಸ್ಕ್ ದೀಪ ದುರಸ್ತಿಯಾಗಿ ತಿಂಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯ ಸರ್ಕಲ್ ನಲ್ಲಿ ಅಳವಡಿಸಿರುವ ಹೈ ಮಾಸ್ಕ್ ದೀಪಕೆಟ್ಟು ಹಲವು ದಿನಗಳ ಕಳೆದಿದೆ. ಆದರೆ ದುರಸ್ತಿ ಮಾಡುವ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತೀವ್ರ ತೊಂದರೆಯಾಗಿದೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಹನೂರು, ಎಲ್ಲೇಮಾಳ ಮಾರ್ಗವಾಗಿ ಹಾಗೂ ಅಜ್ಜೀಪುರ ರಾಮಪುರ ಮಾರ್ಗವಾಗಿ ತೆರಳಿ ಕೌದಳ್ಳಿ ಗ್ರಾಮದ ಸರ್ಕಲ್ ನಲ್ಲಿ ಸೇರಿ ನಂತರ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳು ಸರಕು ಸಾಗಣೆ ವಾಹನ ಬಸ್, ಸೇರಿದಂತೆ ಇನ್ನಿತರ ವಾಹನಗಳ ಮೂಲಕ ತೆರಳುತ್ತಾರೆ.
ಆದರೆ ಕೌದಳ್ಳಿ ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿಯೇ ಹೈ ಮಾಸ್ ದೀಪವನ್ನು ದುರಸ್ತಿ ಮಾಡದಿದ್ದ ಮೇಲೆ ಇನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಗ್ರಾಮದ ವಿದ್ಯುತ್ ದೀಪಗಳು ಕೆಟ್ಟು ನಿಂತರೆ ಯಾವ ರೀತಿ ಕ್ರಮವಹಿಸುತ್ತಾರೆ ಎಂಬುದಕ್ಕೆ ಇದೆ ಉದಾಹರಣೆಯನ್ನು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಮಹಾನವಮಿ ಆಯುಧ ಪೂಜೆ ವಿಜಯದಶಮಿ ದೀಪಾವಳಿ ಕಾರ್ತಿಕ ಮಾಸ ಜಾತ್ರಾ ಮಹೋತ್ಸವಗಳು ಆಗಮಿಸುವ ಹಿನ್ನೆಲೆ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುತ್ತಾರೆ ಇನ್ನು ಮುಂದಾದರು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸರ್ಕಲ್ ನಲ್ಲಿರುವ ಹೈ ಮಾಸ್ಕ್ ದೀಪವನ್ನು ದುರಸ್ತಿ ಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಿದೆ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…
371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…
‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…
ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…