ಚಾಮರಾಜನಗರ: ಕಾವೇರಿ ನದಿ ಆರ್ಭಟಕ್ಕೆ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆಯಾಗಿದೆ.
ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.
ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆಯಾಗಿದೆ. 72 ಅಡಿ ಎತ್ತರದಿಂದ ಆರ್ಭಟಿಸುತ್ತಾ ಧುಮ್ಮಿಕ್ಕುತ್ತಿದ್ದ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆಯಾಗುವ ರೀತಿಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ.
ಕಾವೇರಿ ನದಿಯು ತನ್ನ ಉದ್ದಗಲಕ್ಕೂ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಭಯಭೀತರಾಗಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…