ಹನೂರು : ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿ ವಿಷಪ್ರಸಾದ ಬಾಧಿತರು ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸುಳ್ವಾಡಿ ಮಾರಮ್ಮ ದೇವಸ್ಥಾನದ ಮೇಲ್ಭಾಗದಲ್ಲಿ ಹೊಸ ಗೋಪುರ ನಿರ್ಮಾಣ ಮಾಡುವ ಸಂದರ್ಭದಲ್ಲಿ ತಯಾರಿಸಿದ್ದ ಪ್ರಸಾದಕ್ಕೆ ಇಮ್ಮಡಿ ಮಹದೇವಸ್ವಾಮಿ ಹಾಗೂ ಈತನ ಸಹಚರರು ವಿಷ ಬೆರೆಸಿದ್ದರು. ಬಿದರಹಳ್ಳಿ, ದೊಡ್ಡಾಣೆ, ಎಂ.ಜಿ.ದೊಡ್ಡಿ, ಸುಳ್ಳಾಡಿ, ಸುತ್ತಮುತ್ತಲಿನ ಭಕ್ತಾದಿಗಳು ಹಾಗೂ ಓಂಶಕ್ತಿ ಮಾಲಾಧಾರಿಗಳು ಪ್ರಸಾದ ಸ್ವೀಕರಿಸಿ 17 ಜನರು ಮೃತಪಟ್ಟಿದ್ದಲ್ಲದೆ, 150ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳು ಕಳೆದ 6 ವರ್ಷ 10 ತಿಂಗಳುಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹಲವು ಬಾರಿ ಆರೋಪಿಗಳು ಹೈಕೋರ್ಟ್, ಸುಪ್ರೀಂ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ವಜಾ ಮಾಡಲಾಗಿತ್ತು.
ನವೆಂಬರ್ 12ರ ಮಂಗಳವಾರ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಹೈಕೋರ್ಟ್ ವೈದ್ಯಕೀಯ ಚಿಕಿತ್ಸೆಗೆಂದು ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನು ಖಂಡಿಸಿ ವಿಷ ಪ್ರಸಾದ ಬಾಧಿತರು ಪ್ರತಿಭಟನೆ ನಡೆಸಿದರು.
ಇದನ್ನು ಓದಿ: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ: ಎ.1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು
ಇಮ್ಮಡಿ ಮಹಾದೇವಸ್ವಾಮಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ, ಯಾವೆಲ್ಲ ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ ಎಂಬುದು ಗೊತ್ತಿಲ್ಲ. ಸುಳ್ಳಾಡಿ ವಿಷಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಲಾಗಿರುವ ಜಾಮೀನು ತಡೆಗಾಗಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಪ್ರಕರಣದ ಸಂತ್ರಸ್ತರು ಒತ್ತಾಯಿಸಿದರು. ಜಾಮೀನು ಮಂಜೂರು ಮಾಡಿರುವುದು ಸಾಕ್ಷಿದಾರರ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಸಾಕ್ಷ್ಯಗಳು ನಾಶಗೊಳ್ಳುವ ಭೀತಿ ಇದೆ ಎಂದು ಅವರು ಆತಂಕ ವ್ಯಕ್ತ ಪಡಿಸಿದರು.
ಪ್ರಕರಣದಲ್ಲಿ 17 ಭಕ್ತರು ಸಾವಿಗೀಡಾಗಿದ್ದು, 150ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಈಗಲೂ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸಂತ್ರಸ್ತರಿಗೆ ಈವರೆಗೂ ಸರ್ಕಾರ ಸೂಕ್ತ ಚಿಕಿತ್ಸೆ ಕೊಡಿಸುವುದಾಗಲಿ, ಪರಿಹಾರ ನೀಡುವುದಾಗಲಿ ಮಾಡಿಲ್ಲ ಎಂದು ಸಂತ್ರಸ್ತರು ಆರೋಪಿಸಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…