ಗುಂಡ್ಲುಪೇಟೆ: ಜಿಂಕೆಯನ್ನು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ರಾಷ್ಟ್ರೀಯ ಉದ್ಯಾನವನ ಬಂಡೀಪುರ ವ್ಯಾಪ್ತಿಯ ಅಣ್ಣೂರು ಕೇರಿ ವಲಯದಲ್ಲಿ ಈ ಘಟನೆ ನಡೆದಿದೆ.
ಅಣ್ಣೂರು ಕೇರಿ ಗ್ರಾಮದ ರವಿ, ಸಿದ್ದರಾಜು, ಮಹೇಶ್, ಸುರೇಶ್ ಹಾಗೂ ಸಿದ್ದಶೆಟ್ಟಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ ಒಂದು ನಾಡ ಬಂದೂಕು, ತಲೆ ಬ್ಯಾಟರಿ, ಮಚ್ಚು ಹಾಗೂ ಬ್ಯಾಗನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.





