ಕೊಳ್ಳೇಗಾಲ: ಜಗಳ ಬಿಡಿಸಲು ಹೋದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ.
ಕುಣಗಳ್ಳಿ ಗ್ರಾಮದ ಚನ್ನಯ್ಯ ಹಲ್ಲೆಗೆ ಒಳಗಾದವರು. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆುಂಲ್ಲಿ ದೂರು ದಾಖಲಾಗಿದೆ.
ಅದೇ ಗ್ರಾಮದ ಡಿ.ಕೆ.ಶಿವಕುಮಾರ್ ಮತ್ತು ಲೋಕೇಶ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆಯುತ್ತಿದ್ದಾಗ ಜಗಳ ಬಿಡಿಸಲು ಹೋದ ಚನ್ನಯ್ಯ ಅವರಿಗೆ ಶಿವಕುವಾರ್ ಹಾಗೂ ಆತನ ಸಹೋದರ ಕಾಶಿ ಹಿಂಬದಿಯಿಂದ ಮಾರಕಾಸ್ತ್ರದಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಇದರಿಂದ ಚನ್ನಯ್ಯ ಅವರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿದೆ.
ಗಾಯಾಳು ಚನ್ನಯ್ಯ ಅವರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…