ಚಾಮರಾಜನಗರ : ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ಡಾ. ಸಿಂಧುಜಾ (28) ಶುಕ್ರವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.
ಡಾ. ಸಿಂಧುಜಾ ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದರು. ಮಹದೇಶ್ವರ ಕಾಲೇಜು ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಶುಕ್ರವಾರ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ.
ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೈದ್ಯೆಯ ಶವದ ಬಳಿ ಸಿರೆಂಜ್ ಪತ್ತೆಯಾಗಿದೆ. ಜನವರಿ 2 ಕ್ಕೆ ಡಾ. ಸಿಂಧುಜಾ ಮದುವೆ ನಿಶ್ಚಯವಾಗಿತ್ತು. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಮಿಳುನಾಡಿನವರಾದ ಸಿಂಧುಜಾ ಎಂಬಿಬಿಎಸ್ ಕೋರ್ಸ್ ಮಾಡಿದ್ದರು. ಬಳಿಕ ಸ್ನಾತಕೋತ್ತರ ಪದವಿಗೆ ಸೇರಿದ್ದರು. ಸ್ನಾತಕೋತ್ತರ ಪದವಿ ಶಿಕ್ಷಣದ ಭಾಗವಾಗಿ ಅವರು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಆಸ್ಪತ್ರೆಯಲ್ಲಿ ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಸಿಂಧುಜಾ, ನಿನ್ನೆ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಿದ್ದರು.
ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ…
ಬೆಂಗಳೂರು : ಆರ್‌ಎಸ್‌ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ…
ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…
ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸಿಐಡಿ…
ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…