ಕೊಳ್ಳೇಗಾಲ: ಸಿಹಿ ಸಂಭ್ರಮದಲ್ಲಿ ಆರಂಭಗೊಂಡಿದ್ದ ಹೊಸ ವರ್ಷದ ಮೊದಲ ದಿನವು ಕಹಿ ಅವಘಡದೊಂದಿಗೆ ಅಂತ್ಯಗೊಂಡಿದೆ. ರಕ್ತ ಹಂಚಿಕೊಂಡು ಹುಟ್ಟಿದ ಅಣ್ಣನೇ ತನ್ನ ಸಹೋದರಿಯನ್ನು ಕೊಲೆಗೈದಿದ್ದಾನೆ.
ಪಟ್ಟಣದ ಈದ್ಗಾ ಮೊಹಲ್ಲ ನಿವಾಸಿ ಫರ್ಮನ್ ಪಾಷ(30) ಕೊಲೆ ಆರೋಪಿ. ಈತನ ಸಹೋದರಿ ಐಮನ್ ಬಾನು (23) ಕೊಲೆಯಾದ ಯುವತಿ.
ಕೌಟುಂಬಿಕ ಕಲಹದಿಂದ ಮನೆಯಲ್ಲಿ ಮಂಗಳವಾರ ಜೋರು ಗಲಾಟೆ ನಡೆದಿದೆ. ಈ ವೇಳೆ ಕೋಪದಲ್ಲಿ ಸಹೋದರಿ ಐಮನ್ ಮೇಲೆ ಹಲ್ಲೆ ಮಾಡಿ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು ಕೊಂದಿದ್ದಾನೆ. ಈ ವೇಳೆ ಅತ್ತಿಗೆ ತಸ್ಲಿಮ್ ತಾಜ್, ತಂದೆ ಸೈಯದ್ ಪಾಷ ಮೇಲು ಮಾರಣಾಂತಿಕ ಹಲ್ಲೆ ನಡೆಸಿ ದ್ದಾನೆ.
ಬಳಿಕ, ತಸ್ಲಿಮ್ ತಾಜ್, ಸೈಯದ್ ಪಾಷ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಆಸ್ಪತ್ರೆಗೆ ರವಾನಿಸಲಾಗಿದೆ. ಐಮನ್ ಬಾನು ಮೃತ ದೇಹವನ್ನು ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ವರ್ಷಾ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಕ್ರಮ ಕೈಗೊಂ ಡಿದ್ದಾರೆ. ಆರೋಪಿ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆಸ್ಪತ್ರೆಯಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…