Mysore
21
overcast clouds
Light
Dark

ಕೊಳ್ಳೇಗಾಲ ತಾಲ್ಲೂಕಿನ 10 ಗ್ರಾಮಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ  ಭಾರೀ ಪ್ರವಾಹ ಭೀತಿ ಎದುರಾಗಿದೆ.

ಹಳೇ ಹಂಪಾಪುರ, ದಾಸನಪುರ, ಸರಗೂರು ಸೇರಿದಂತೆ 9 ಗ್ರಾಮಗಳಿಗೆ ನದಿಯ ನೀರು ನುಗ್ಗಿ ಹೊಲಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದು, ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ತೀವ್ರ ಸಂಕಷ್ಟ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ 10 ಗ್ರಾಮಗಳ ಶಾಲೆಗಳು ಹಾಗೂ ಅಂಗನವಾಡಿಗೆ ನಾಳೆ ರಜೆ ಘೋಷಣೆ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಕೊಳ್ಳೇಗಾಲದಲ್ಲಿ ಪ್ರವಾಹ ತಲೆದೂರಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ದರಿಂದ ಎಲ್ಲರೂ ಮುಂಜಾಗ್ರತೆ ವಹಿಸಬೇಕು. ಯಾರೂ ಕೂಡ ನದಿಯ ಬಳಿ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಇನ್ನು ಕಾವೇರಿ ನದಿ ಆರ್ಭಟದಿಂದ ರೈತರು ಭಾರೀ ಸಂಕಷ್ಟಕ್ಕೆ ಈಡಾಗಿದ್ದು, ಬೆಳೆ ನಾಶದಿಂದ ಕಂಗಾಲಾಗಿದ್ದಾರೆ.  ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.