ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಭಾರೀ ಪ್ರವಾಹ ಭೀತಿ ಎದುರಾಗಿದೆ.
ಹಳೇ ಹಂಪಾಪುರ, ದಾಸನಪುರ, ಸರಗೂರು ಸೇರಿದಂತೆ 9 ಗ್ರಾಮಗಳಿಗೆ ನದಿಯ ನೀರು ನುಗ್ಗಿ ಹೊಲಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದು, ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ತೀವ್ರ ಸಂಕಷ್ಟ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ 10 ಗ್ರಾಮಗಳ ಶಾಲೆಗಳು ಹಾಗೂ ಅಂಗನವಾಡಿಗೆ ನಾಳೆ ರಜೆ ಘೋಷಣೆ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಪ್ರವಾಹ ತಲೆದೂರಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ದರಿಂದ ಎಲ್ಲರೂ ಮುಂಜಾಗ್ರತೆ ವಹಿಸಬೇಕು. ಯಾರೂ ಕೂಡ ನದಿಯ ಬಳಿ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಇನ್ನು ಕಾವೇರಿ ನದಿ ಆರ್ಭಟದಿಂದ ರೈತರು ಭಾರೀ ಸಂಕಷ್ಟಕ್ಕೆ ಈಡಾಗಿದ್ದು, ಬೆಳೆ ನಾಶದಿಂದ ಕಂಗಾಲಾಗಿದ್ದಾರೆ. ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…