ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಬೈಕ್, ಟಾಟಾ ಏಸ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರ ಗಾಯವಾಗಿದೆ.
ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಇಂದು(ಮಾರ್ಚ್.25) ಬೈಕ್, ಟಾಟಾ ಏಸ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ.
ಈ ದುರಂತದಲ್ಲಿ ಮೃತ ದುರ್ದೈವಿಗಳನ್ನು ಕೊಳ್ಳೇಗಾಲ ತಾಲೂಕಿನ ಬಾಣೂರು ಗ್ರಾಮದ ರಾಜಮ್ಮ (53) ಮತ್ತು ಶೃತಿ( 30) ಎಂದು ಗುರುತಿಸಲಾಗಿದೆ. ಅಲ್ಲದೇ ಅಪಘಾತದಲ್ಲಿ ಬೈಕ್ ಸವಾರ ಪ್ರಕಾಶ್, ಬಸ್ ಚಾಲಕ ರಾಜಶೇಖರ್ ಹಾಗೂ ಟಾಟಾ ಏಸ್‌ನಲ್ಲಿದ್ದ ಬಾಣೂರು ಗ್ರಾಮದ 13 ಮಂದಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಚಿಕಿತ್ಸೆಗಾಗಿ ಸಿಮ್ಸ್ ಮತ್ತು ಮೈಸೂರಿಗೆ ರವಾನೆ ಮಾಡಲಾಗಿದೆ. ಇನ್ನು ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…