ಕೊಳ್ಳೇಗಾಲ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಹರಳೆ ಕ್ರಾಸ್ ಬಳಿ ಸೋಮವಾರ ಸಂಜೆ ಜರುಗಿದೆ.
ತಾಲ್ಲೂಕಿನ ಹರಳೆ ಗ್ರಾಮದ ನಾಗಬಸವಯ್ಯ(75) ಎಂಬಾತ ಮೃತ್ತ ವ್ಯಕ್ತಿ. ಬೈಕ್ ನಲ್ಲಿ ಹರಳೆಯಿಂದ ಪಟ್ಟಣಕ್ಕೆ ಆಗಮಿಸುತ್ತಿರುವಾಗ ಮುಖ್ಯ ರಸ್ತೆಯ ಕ್ರಾಸ್ ಬಳಿ ಬೈಕ್ ತಿರುಗಿಸುವಾಗ ಬೆಂಗಳೂರು ಕಡೆಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ನಾಗಬಸವಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.