ಚಾಮರಾಜನಗರ

ಕೊಳ್ಳೇಗಾಲ | ಪ್ರತ್ಯೇಕ ಪ್ರಕರಣ : ಗಾಂಜಾ ಮಾರಾಟ ; ಇಬ್ಬರ ಬಂಧನ

ಕೊಳ್ಳೇಗಾಲ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಣಗಾಂಜಾವನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ, 462 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ನಾಗರಾಜು ಅಲಿಯಾಸ್ ಬಕಾಸುರ ಎಂಬಾತ ಗುಂಡಾಲ್ ಕಡೆಯಿಂದ ಕಾಮಗೆರೆ ಕಡೆಗೆ ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಅರಿತ ಪೊಲೀಸರು  ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 322 ಗ್ರಾಂ ಒಣಗಾಂಜಾ ಮತ್ತು ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ತಾಲ್ಲೂಕಿನ ಇರಮ್ಮಾನದೊಡ್ಡಿ ಗ್ರಾಮದಲ್ಲಿ ರಂಗೇಗೌಡ ಎಂಬಾತನಿಂದ 140 ಗ್ರಾಂ ಒಣಗಾಂಜಾವನ್ನು ಜಪ್ತಿ ಮಾಡಿ ಆರೋಪಿಯನ್ನು ಬಂದೀಸಿದ್ದಾರೆ. ದಾಳಿಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಎಸ್.ಎ.ಸುಪ್ರೀತ್, ಎಎಸ್‌ಐ ಗೋವಿಂದ, ಪೇದೆಗಳಾದ ಡಿ.ಎಸ್.ಪೂಜೇರಿ, ದಿನೇಶ್, ಸಿದ್ದರಾಜು, ವಿಜಯ್ ಕುಮಾರ್ ಭಾಗವಹಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

18 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

18 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago