ಕೊಳ್ಳೇಗಾಲ : ಭತ್ತ ಕಟಾವು ಯಂತ್ರ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ದಾರುಣ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಜಿನಕನಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ.
ಪಾಳ್ಯ ಗ್ರಾಮದ 32 ವರ್ಷದ ಸಂತೊಷ್, ಆತನ ಪತ್ನಿ 27 ವರ್ಷದ ಸೌಮ್ಯ, ಇವರ ಮಕ್ಕಳಾದ 9 ವರ್ಷದ ಅಭಿ ಹಾಗೂ ನಾಲ್ಕು ವರ್ಷದ ನಿತ್ಯಸಾಕ್ಷಿ ಎಂಬುವವರು ಸಂಕ್ರಾಂತಿ ಹಬ್ಬದ ದಿನವೇ ಮೃತಪಟ್ಟ ದುರ್ದೈವಿಗಳು.
ಹೌದು, ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಮಕ್ಕಳೊಂದಿಗೆ ತಂದೆ ತಾಯಿ ಪಾಳ್ಯ ಗ್ರಾಮದಿಂದ ಕೊಳ್ಳೇಗಾಲದ ದೇವಸ್ಥಾನವೊಂದಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
ಇನ್ನು ಘಟನೆಗೆ ಭತ್ತ ಕಟಾವು ಯಂತ್ರದ ಚಾಲಕನ ಅಜಾಗರೂಕತೆಯ ಚಾಲನೆ ಕಾರಣ ಎನ್ನಲಾಗಿದೆ. ಬೈಕ್ ಡಿಕ್ಕಿ ಹೊಡೆದು ಸುಮಾರು ನಲವತ್ತು ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದ್ದು ರಸ್ತೆಯಲ್ಲಿ ಬರುತ್ತಿದ್ದವರು ಕೂಗಿಕೊಂಡಾಗ ವಾಹನ ನಿಲ್ಲಿಸಿದ ಚಾಲಕ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ.
ಇನ್ನು ಘಟನೆಯಲ್ಲಿ ತಂದೆ ತಾಯಿ ಹಾಗೂ ಪುತ್ರಿ ಸ್ಥಳದಲ್ಲೇ ಸಾವಿಗೀಡಾಗಿದ್ದು ತೀವ್ರ ಗಾಯಗೊಂಡಿದ್ದ ಪುತ್ರ ಅಭಿನನ್ನು ಚಾಮರಾಜನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಇನ್ನು ಘಟನಾ ಸ್ಥಳಕ್ಕೆ ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹು, ಡಿವೈಎಸ್ಪಿ ಸೋಮೇಗೌಡ, ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ, ಗ್ರಾಮಾಂತರ ಠಾಣೆಯ ಪಿಎಸ್‌ಐ ಗಣಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…