ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.
ಕುಣಗಳ್ಳಿಯ ರಾಮಕೃಷ್ಣ ಕೊಲೆಯಾದ ವ್ಯಕ್ತಿಯಾಗಿದ್ದು, ಜೆಸಿಬಿ ಚಾಲಕ ಮಲ್ಲಿಕಾರ್ಜುನ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಭಾನುವಾರ ರಾತ್ರಿ ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಜಗಳವಾಗಿ ಜೊತೆಯಲ್ಲಿದ್ದ ರಾಮಕೃಷ್ಣನ ಮೇಲೆ ಮಲ್ಲಿಕಾರ್ಜುನ ರಾಡಿನಿಂದ ಹೊಡೆದು ಕೊಲೆ ಮಾಡಿ ನಂತರ ಪೊಲೀಸರಿಗೆ ಶರಣಾಗಿದ್ದಾನೆ.
ಅಗರ ಮಾಂಬಳ್ಳಿ ಪೊಲೀಸರು ಸ್ಥಳ ಮಹಜರ್ ನಡೆಸಿದ್ದಾರೆ. ಎಸ್ಪಿ ಮುತ್ತುರಾಜ್ ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹಳೇ ವೈಷಮ್ಯದಿಂದ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…