ಚಾಮರಾಜನಗರ

ಕೊಳ್ಳೇಗಾಲ: ತಿಮಿಂಗಲ ವಾಂತಿ (ಅಂಬರ್ ಗ್ರೀಸ್) ವಶ; ನಾಲ್ವರ ಬಂಧನ

ಕೊಳ್ಳೇಗಾಲ: 16 ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮಂಗಳೂರು ಜಿಲ್ಲೆಯ ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರಿನ ಚಿತ್ರಂಜಲಿ ನಗರದ ನಿವಾಸಿ ಚೇತನ್ ಕುಮಾರ್, ಮಂಗಳೂರು ತಾಲ್ಲೂಕಿನ ಉಳ್ಳಾಲ ಗ್ರಾಮದ ಶೇಷಪ್ಪ, ಮಂಗಳೂರಿನ ಸುರತ್ಕಲ್ ನಿವಾಸಿ ವೆಂಕಟೇಶ್ ಬಂಧಿತರಾಗಿದ್ದಾರೆ.

ತಮಿಳುನಾಡಿನ ಸೇಲಂ ಕಾಳಸಂತೆಯಲ್ಲಿ ಮಾರಲು ತಯಾರಿ ನಡೆಸಿದ್ದು, ತಾಲ್ಲೂಕಿನ ಸತ್ತೇಗಾಲ ಗ್ರಾಮದ ಹ್ಯಾಂಡ್ ಪೋಸ್ಟ್ ಬಳಿ ನಂತರ ಟೀ ಕುಡಿಯಲು ನಿಂತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದೆ ಪಿಎಸ್‌ಐ ವಿಜಯರಾಜು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದರು.

ನಂತರ ಅವರ ಬಳಿ ಇದ್ದ ತಿಮಿಂಗಲ ವಾಂತಿ, ಮೊಬೈಲ್ ಫೋನ್, ಕಾರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.

andolanait

Recent Posts

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

1 min ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

20 mins ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

39 mins ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

46 mins ago

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

1 hour ago

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

2 hours ago