ಹನೂರು: ಜಾನಪದ ಸಾಹಿತಿ ಡಾ. ಕೃಷ್ಣಮೂರ್ತಿ ಹನೂರು ರವರು ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ಮತ್ತು ಜಾನಪದ ರಾಯಭಾರಿಯಾಗಿದ್ದಾರೆ ಎಂದು ಸಾಹಿತಿ ನಿವೃತ್ತ ಅದ್ಯಾಪಕ ಶಿವಣ್ಣ ಇಂದ್ವಾಡಿ ರವರು ಅಭಿಪ್ರಾಯ ಪಟ್ಟರು.
ಪಟ್ಟಣದ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಹನೂರು ತಾಲ್ಲೋಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಲಾಗಿದ್ದ ಜನಪದ ವಿದ್ವಾಂಸ ಡಾ. ಕೃಷ್ಣಮೂರ್ತಿ ಹನೂರು ರವರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಾವುದೇ ಶಿಕ್ಷಣ ಪದವಿ ಪಡೆಯದೆ ನಮ್ಮ ಜನಪದರು ಮಲೆ ಮಾದೇಶ್ವರ ಮಂಟೇಸ್ವಾಮಿ ಮತ್ತು ಬಿಳಿಗಿರಿ ರಂಗನ ಕಾವ್ಯಗಳನ್ನು ಕಟ್ಟಿದ್ದಾರೆ. ಕನ್ನಡದ ದೊಡ್ಡ ದೊಡ್ಡ ವಿದ್ವಾಂಸರು ಬೆಳೆದಿರುವುದು ಅಜ್ಜಿ ಹೇಳುವ ಕತೆಗಳಿಂದ. ಅಂತಹ ಅಜ್ಜಿಯಂದಿರು ಮರಣಿಸಿದರೆ ಒಂದು ಜಾನಪದ ಗ್ರಂಥಾಲಯವೆ ಸತ್ತುಹೋದಂತೆ.
ಪರಸ್ಪರ ಸಂಬಂಧ ಬೆಳೆಸುವ ಮಕ್ಕಳ ಕತೆ, ಲಾಲಿಪದ, ಹೊಲಗದ್ದೆಗಳಲ್ಲಿ ಹಾಡುವ ಜಾನಪದ ಹಾಡುಗಳು ಇಂದು ಮರೆಯಾಗುತ್ತಿವೆ. ಆಧುನಿಕ ಜಗತ್ತಿನಲ್ಲಿ ಟಿವಿ ಮತ್ತು ಮೊಬೈಲ್ ಮಾದ್ಯಮಗಳ ನಡುವೆ ಪ್ರೀತಿ, ಭಾಂದವ್ಯ ಮತ್ತು ಸಾಮಾಜಿಕ ಸಂಬಂಧಗಳಿಂದ ದೂರ ಉಳಿಯುವಂತೆ ಮಾಡುತ್ತಿವೆ. ಇಂತಹ ಪರಿಸರದಲ್ಲಿ ನಾವು ಬದುಕುತ್ತಿರುವುದು ದುರಂತ.
ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ಜನಪದರು ಒತ್ತುತಂದ ಹಾಡುಗಳು ಹಾಗೂ ಸಾಹಿತಿಗಳು ರಚಿಸಿದ ಸಾಹಿತ್ಯವನ್ನು ಸ್ಮರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶೈಲೇಶ್ ಕುಮಾರ್ ರವರು ಚಾಮರಾಜನಗರ ಜಿಲ್ಲಾ ಕನ್ನಡ ಪರಿಷತ್ ಮೊದಲ ಅಧ್ಯಕ್ಷರಾದ ಮಲೆಯೂರು ಗುರುಸ್ವಾಮಿ ರವರ ಶ್ರೇಷ್ಠ ಪರಂಪರೆಯ ಹಾದಿಯಲ್ಲಿ ನಾವು ಸಾಗುತ್ತಿದ್ದೇವೆ. ಕನ್ನಡ ಭಾಷೆ ಶುದ್ಧ, ವೈಜ್ಞಾನಿಕ ಮತ್ತು ಯಾವುದೇ ಸಂದರ್ಭದಲ್ಲಿಯೂ ಎಲ್ಲರಿಗೂ ಹೊಂದಿಕೊಳ್ಳುವ ಭಾಷೆಯಾಗಿದೆ. ಅನ್ಯ ರಾಜ್ಯಗಳಾದ ತಮಿಳುನಾಡು, ಮಹಾರಾಷ್ಟ್ರ, ಆಂಧ್ರ ಪ್ರದೇಶ ರಾಜ್ಯಗಳ ವರೆಗೆ ವಿಶಾಲ ಕರ್ನಾಟಕದ ಪಸರಿಸಿತ್ತು. ಈಗಲೂ ಸಹ ಆ ಭಾಗದಲ್ಲಿ ಕನ್ನಡದ ಕುರುಹು ಇದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅದ್ಯಕ್ಷ ಮಲ್ಲೇಶ್ ಮಹಾಲಿಂಗನಕಟ್ಟೆ, ವಿವೇಕಾನಂದ ಕಾಲೇಜು ಪ್ರಾಂಶುಪಾಲ ಮಧುಸೂಧನ್, ಸಂಚಾಲಕರಾದ ರಾಜೇಂದ್ರ ಹಾಗೂ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…