ಚಾಮರಾಜನಗರ

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಜರುಗಿದೆ.

ಟಿ.ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಟಿ ನರಸೀಪುರ ತಾಲೂಕಿನ ಲಿಖಿತ, ರುಕ್ಮಿಣಿ, ಕೊಳ್ಳೇಗಾಲದ ಮಂಜುನಾಥ್, ಕಾವ್ಯ, ಪ್ರತಾಪ್ ರವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದರೆ, ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದ ಜ್ಯೋತಿರವರಿಗೆ, ಮೈಸೂರಿನ ಇಲವಾಲದ ಮಹೇಶ್ ರವರಿಗೆ ಬಲಕೈಕಾಲು ತೀವ್ರ ಗಾಯವಾಗಿವೆ. ಕೊಳ್ಳೇಗಾಲ ಮೂಲದ ಸಣ್ಣಮ್ಮ ಎಂಬುವರಿಗೆ ಸೊಂಟ ಮುರಿದಿದ್ದು ಸ್ಫೈನಲ್ ಕಾರ್ಡ್ ಮುರಿದಿರುವುದರಿಂದ ತೀವ್ರ ಗಾಯಗೊಂಡಿದ್ದಾರೆ.

ಘಟನೆ ವಿವರ: ವಿವಿಧ ಗ್ರಾಮಗಳಿಂದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಾಪಸ್ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಸಂಖ್ಯೆ ( KA-09 F5111)ಮೂಲಕ 50 ಪ್ರಯಾಣಿಕರು ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹಾಲರವಿ ಹಳ್ಳದ ಸಮೀಪ ಬಸ್ ಪಲ್ಟಿಯಾಗಿದೆ.

ತಕ್ಷಣ ದಾರಿ ಹೋಕರು ತುರ್ತು ಆಂಬುಲೆನ್ಸ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಪ್ರಾಧಿಕಾರದ ನೂತನ ಆಂಬುಲೆನ್ಸ್ ಹಾಗೂ ೧೦೮ ಆಂಬುಲೆನ್ಸ್ ಮೂಲಕ ಕೆಲವು ಗಾಯಾಳುಗಳನ್ನು ಮಲೆಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ, ಹೆಚ್ಚು ಗಾಯಗೊಂಡಿದ್ದ ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಬಸ್ ಚಾಲಕ ಅನಿಲ್ ಕುಮಾರ್ ಹಾಗೂ ನಿರ್ವಾಹಕ ಜಗದೀಶ್ ರವರು ಸಹ ಗಾಯಗೊಂಡಿದ್ದಾರೆ. ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಸ್ ಚಾಲಕ ಅನಿಲ್ ಬ್ರೇಕ್ ಪೆಲ್ ಆಗಿ ಪಲ್ಟಿಯಾಗಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪ್ರಯಾಣಿಕರು ಬಸ್ ಚಾಲಕನ ಅತಿ ವೇಗವೇ ಈ ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ ಪ್ರಾಧಿಕಾರದ ಕಾರ್ಯದರ್ಶಿ ರಘು, ಡಿಎಚ್ಒ ಡಾ, ಚಿದಂಬರಂ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಮ.ಬೆಟ್ಟದ ಇನ್ಸ್‌ಪೆಕ್ಟರ್ ಜಗದೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯ‌ ಪ್ರವೃತ್ತರಾಗಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲು ಸೂಕ್ತ ಕ್ರಮ ವಹಿಸಿದ್ದಾರೆ.

ಘಟನೆಯ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

5 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

5 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

5 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

5 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

5 hours ago