ಚಾಮರಾಜನಗರ

ಸಾರಿಗೆ ಬಸ್-ಬೈಕ್‌ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಹನೂರು : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೌದಳ್ಳಿ ಗ್ರಾಮದ ಸಮೀಪ ನಡೆದಿದೆ.

ಹನೂರು ತಾಲ್ಲೂಕಿನ ಕೌದಳ್ಳಿ ಗ್ರಾಮದ ಪೀಟರ್ಸ್ ಕಾಲೋನಿಯ ನಿವಾಸಿ ಜೀವನ್ (18) ಮೃತಪಟ್ಟ ಯುವಕ.

ಘಟನೆಯ ವಿವರ: ಕೌದಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ನಲ್ಲಿ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಿಕೊಳ್ಳಲು ತೆರಳುತ್ತಿದ್ದಾಗ ಮಲೆ ಮಹದೇಶ್ವರ ಬೆಟ್ಟದಿಂದ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಸಾರಿಗೆ ಬಸ್ ಚಾಲಕರು ಗ್ರಾಮದ ಪರಿಮಿತಿಯಲ್ಲಿಯೂ ನಿಧಾನವಾಗಿ ಚಲಿಸದೇ ಇರುವುದರಿಂದ ಇಂತಹ ಘಟನೆಗಳು ಪದೇಪದೇ ಮರುಕಳಿಸುತ್ತಿವೆ. ಅಲ್ಲದೆ ರಸ್ತೆ ಡುಬ್ಬಗಳನ್ನೂ ನಿರ್ಮಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ 1 ಗಂಟೆ ಕಾಲ ರಸ್ತೆ ತಡೆದು ಪ್ರತಿಭಟಿಸಿದರು. ಇದರಿಂದ ಮಲೆ ಮಹದೇಶ್ವರ ಬೆಟ್ಟ ಹಾಗೂ ಕೌದಳ್ಳಿ ಮಾರ್ಗವಾಗಿ ಚಲಿಸುತ್ತಿದ್ದ ವಾಹನಗಳು ರಸ್ತೆಯಲ್ಲಿ ನಿಂತು ಸಂಚಾರಕ್ಕೆ ತೊಂದರೆಯಾಯಿತು.

ರಾಮಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸಿ ಬಸ್ ವಶಕ್ಕೆ ಪಡೆದು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟರು. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago