ಹನೂರು: ಕೆಎಸ್‌ಆರ್‌ಟಿಸಿ ಬಸ್ ಟೈಯರ್ ಸಿಡಿದು 20ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಈ ಘಟನೆ ನಡೆದಿದ್ದು, ಹನೂರು ಪಟ್ಟಣದಿಂದ ಅಜ್ಜೀಪುರ-ರಾಮಾಪುರ ಕೌದಳ್ಳಿ ಮಾರ್ಗವಾಗಿ ದಂಟಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬಸ್‌ನ ಮುಂಭಾಗದ ಟೈರ್ ಏಕಾಏಕಿ ಸಿಡಿದಿದೆ. ಆದರೆ ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಪ್ರಯಾಣಿಕರು, ಈ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳ ಟೈರ್‌ಗಳು ಕಳಪೆಯಾಗಿದ್ದು, ಅತಿ ಹೆಚ್ಚು ಸವೆದಿರುವ ಟೈರ್‌ಗಳನ್ನು ಹಾಕಿ ಸಂಚಾರ ಮಾಡುತ್ತಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಆರೋಪ ಮಾಡಿದ್ದಾರೆ.
ಇನ್ನು ಹನೂರು ತಾಲ್ಲೂಕಿನ ಕಾಡಂಚಿನಲ್ಲಿರುವ ಬರುವ ದಂಟಳ್ಳಿ ಗ್ರಾಮಕ್ಕೆ ಕಳೆದ ನಾಲ್ಕೈದು ತಿಂಗಳಿನಿಂದ ತಾತ್ಕಾಲಿಕವಾಗಿ ಬಸ್ ವ್ಯವಸ್ಥೆ ನಿಲ್ಲಿಸಲಾಗಿತ್ತು. ಆದರೆ ರೈತ ಮುಖಂಡರು ಹಾಗೂ ಸಾರ್ವಜನಿಕರ ಮನವಿ ಮೇರೆಗೆ ಬಸ್ ಸಂಚಾರ ಪ್ರಾರಂಭಿಸಲಾಗಿದೆ. ಆದರೆ ಸಂಚಾರಕ್ಕೆ ಯೋಗ್ಯವಾಗಿರುವ ವಾಹನಗಳನ್ನು ನೀಡದೇ ಡಕೋಟಾ ಬಸ್‌ಗಳನ್ನು ನೀಡುತ್ತಿರುವುದರಿಂದ ಎಲ್ಲೆಂದರಲ್ಲಿ ರಿಪೇರಿಯಾಗಿ ಹಾಗೂ ಟೈರ್ ಸಮಸ್ಯೆಯಿಂದ ನಿಲ್ಲುತ್ತಿವೆ. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹನೂರು ತಾಲ್ಲೂಕು ವ್ಯಾಪ್ತಿಗೆ ಗುಣಮಟ್ಟದ ಬಸ್‌ಗಳನ್ನು ಬಿಡುವಂತೆ ಒತ್ತಾಯಿಸಿದ್ದಾರೆ.
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…
ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…