ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರಿಂದ ಶ್ರಾವಣ ಮಾಸದ ಮುಕ್ತಾಯದ ಹಿನ್ನೆಲೆಯಲ್ಲಿ ೧೦೮ ಕುಂಭೋತ್ಸವ ಸೇವೆ ಶನಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು.
ಶನಿವಾರ ಬೆಳಿಗ್ಗೆ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘುರವರ ನೇತೃತ್ವದಲ್ಲಿ
ಬೇಡಗಂಪಣ ಅರ್ಚಕರು ಸ್ವಾಮಿಗೆ ವಿವಿಧ ಹೋಮ-ಹವನ, ಪೂಜೆಗಳನ್ನು ನೆರವೇರಿಸಿದರು.
ಇದರೊಟ್ಟಿಗೆ, ೧೦೮ ಎಳನೀರುಗಳಿಂದಲೂ ಅಭಿಷೇಕ ಮಾಡುವ ಮೂಲಕ ಶ್ರಾವಣ ಮಾಸದ ವಿಶೇಷ ಪೂಜೆ ನೆರವೇರಿತು.
ದೇವಾಲಯದ ರಾಜಗೋಪುರದ ಮುಂದೆ ಮಜ್ಜನ ಬಾವಿಗೆ ತೆರಳಿ ಗಂಗೆ ಪೂಜೆ ಸೇರಿ ವಿಶೇಷ ಪೂಜೆ ಕೈಗೊಂಡರು. ಬಳಿಕ ವಾದ್ಯಮೇಳ, ಛತ್ರಿ, ಚಾಮರಗಳೊಂದಿಗೆ ೧೦೮ ಅರ್ಚಕರು ಕುಂಭ ಹೊತ್ತು ದೇವಾಲಯದ ಹೊರ ಹಾಗೂ ಒಳ ಆವರಣದಲ್ಲಿ ಮೆರವಣಿಗೆ ಮಾಡಿ ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದರು. ಪೂಜೆ ನಡೆದ ನಂತರ ಕುಂಬಾಭಿಷೇಕ ನೆರವೇರಿಸಿದರು.
ಮೆರವಣಿಗೆಯಲ್ಲಿ ಉಮಾಮಹೇಶ್ವರಿ, ನಂದಿಕಂಬ, ವೀರಗಾಸೆ ಕುಣಿತ ಕಲಾತಂಡಗಳು ಭಾಗವಹಿಸಿದ್ದವು. ಬೆನಕನ ಅಮಾವಾಸ್ಯೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಸಮುದಾಯದ ಹಿರಿಯರಾದ ಕೆ.ವಿ.ಮಾದೇಶ್, ಆಗಮಿಕರಾದ ಕರವೀರಸ್ವಾಮಿ, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಪಾರುಪತ್ತೆಗಾರ ಮಹದೇವಸ್ವಾಮಿ, ಬೇಡಗಂಪಣ ಸರದಿ ಅರ್ಚಕರು, ಪ್ರಾಧಿಕಾರದ ಸಿಬ್ಬಂದಿ ಹಾಜರಿದ್ದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…