Mysore
23
overcast clouds

Social Media

ಬುಧವಾರ, 22 ಏಪ್ರಿಲ 2026
Light
Dark

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ.

ರಶ್ಮಿ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಪತಿ ಲೋಕೇಶ್‌ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸಂಸಾರದ ವಿಚಾರದಲ್ಲಿ ಬೇಸತ್ತು ವೆಸ್ಲಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!