ಚಾಮರಾಜನಗರ

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಹೊರಡುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಮಪುರ ಪೊಲೀಸರು ಬ್ಯಾರಿಕೇಡ್ ಆಳವಡಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ರಾಮನಗರ, ಬೆಂಗಳೂರು, ಕನಕಪುರ, ಕೋಲಾರ, ತುಮಕೂರು, ಮಾಗಡಿ, ಚನ್ನಪಟ್ಟಣ ಸೇರಿದಂತೆ ಇನ್ನಿತರ ತಾಲ್ಲೂಕಿನ ಗ್ರಾಮಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕಾವೇರಿ ನದಿ ದಾಟಿ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯ ರಸ್ತೆಯ ಮೂಲಕ ಆಗಮಿಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯ ಪ್ರಮುಖ ತಿರುವುಗಳಲ್ಲಿ ಹನೂರು, ರಾಮಾಪುರ, ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗಳಾದ ಆನಂದಮೂರ್ತಿ, ಚಿಕ್ಕರಾಜ ಶೆಟ್ಟಿ, ಜಗದೀಶ್ ನೇತೃತ್ವದಲ್ಲಿ ಬ್ಯಾರಿಕೇಡ್ ಅಳವಡಿಸಿ ನಾಮಫಲಕಗಳನ್ನು ಹಾಕುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಪಾದಯಾತ್ರಿಕರು ಮುಖ್ಯರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ. ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸಿ, ತೀವ್ರ ತಿರುವುಗಳಲ್ಲಿ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ವೇಗ ಕಡಿಮೆ ಮಾಡಿ ಚಲಿಸುವಂತೆ ನಾಮಫಲಕ ಹಾಕುವ ಮೂಲಕ ವಿಶೇಷವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

8 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

9 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

9 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

9 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

10 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

11 hours ago