Mysore
21
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಮಾದಪ್ಪನ ಉತ್ಸವವನ್ನು ಕಣ್ತುಂಬಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

  • ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಚಿವರು

ಮಲೆ ಮಹದೇಶ್ವರ ಬೆಟ್ಟ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಬಳಿಕ ನಡೆದ ಉತ್ಸವದಲ್ಲಿ ಭಾಗಿಯಾದರು.

ಮಾದಪ್ಪನ ಉತ್ಸವ ಮೂರ್ತಿ ಹೊತ್ತಿದ್ದ ಚಿಕ್ಕ ರಥದ ಜೊತೆ ಚಿಕ್ಕ ಬೆಳ್ಳಿ ಗದೆಯನ್ನು ಹೊತ್ತುಕೊಂಡು ದೇವಸ್ಥಾನವನ್ನು ಒಂದು ಸುತ್ತು ಹಾಕಿದರು. ಬಳಿಕ ಬೆಳ್ಳಿ‌ ರಥಕ್ಕೆ ಪೂಜೆ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬುಧವಾರ ಸಂಜೆಯೇ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಿನ್ನೆ ಕೂಡ ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.

ಈ ವೇಳೆ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ:- ಮಹದೇಶ್ವರ ಬೆಟ್ಟ: ಐತಿಹಾಸಿಕ ಸಂಪುಟ ಸಭೆಗೆ ಕ್ಷಣಗಣನೆ

Tags:
error: Content is protected !!