Mysore
23
broken clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಹಿನ್ನೆಲೆ: ಚಾಮರಾಜನಗರ ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆ

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಕೇರಳಕ್ಕೆ ತೆರಳಿರುವವರ ಬಗ್ಗೆ ಮಾಹಿತಿ ನೀಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಧಾರಾಕಾರ ಮಳೆಗೆ ನೆರೆಯ ಕೇರಳ ರಾಜ್ಯದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ರಾಜ್ಯದ ಗಡಿ ಜಿಲ್ಲೆಯಾದ ಚಾಮರಾಜನಗರದಿಂದ ಕೇರಳಕ್ಕೆ ಹೋಗಿ ಬರುವವರ ಸಂಖ್ಯೆ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದಿಂದ ಕೇರಳಕ್ಕೆ ತೆರಳಿರುವವರ ಬಗ್ಗೆ ಸಂಪೂರ್ಣ ವಿವರ ನೀಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ ನೀಡಿದ್ದಾರೆ.

ವಯನಾಡು ಜಿಲ್ಲೆಯಲ್ಲಿ ಉಂಟಾದ ಭೂಕುಸಿತದಲ್ಲಿ ಅಂದಾಜು 70 ಜನರು ಸಿಲುಕಿರುವ ಬಗ್ಗೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಪ್ರವಾಸ, ಜೀವನೋಪಾಯ ಹಾಗೂ ಇನ್ನಿತರೆ ಕಾರಣಕ್ಕೆ ತೆರಳಿರುವವರ ಮಾಹಿತಿಯನ್ನು ಅವರ ಕುಟುಂಬಸ್ಥರು ತಿಳಿಸಬೇಕು. ಆಗ ಅವರನ್ನು ಸುರಕ್ಷಿತವಾಗಿ ಕರೆತರಲು ಅಗತ್ಯ ಕ್ರಮ ವಹಿಸುತ್ತೇವೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ತೆರೆದಿರುವ ಕಂಟ್ರೋಲ್‌ ರೂಂ ದೂರವಾಣಿ ಸಂಖ್ಯೆ: 08226-223163, 08226-223161, 08226-223160 ಹಾಗೂ ಮೊಬೈಲ್‌ ಸಂಖ್ಯೆ 9740942901ಗೆ ಕರೆ ಮಾಡಿ ಮಾಹಿತಿ ತಿಳಿಸಲು ಕೋರಲಾಗಿದೆ.

 

Tags: