ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಕೇರಳಕ್ಕೆ ತೆರಳಿರುವವರ ಬಗ್ಗೆ ಮಾಹಿತಿ ನೀಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಧಾರಾಕಾರ ಮಳೆಗೆ ನೆರೆಯ ಕೇರಳ ರಾಜ್ಯದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ರಾಜ್ಯದ ಗಡಿ ಜಿಲ್ಲೆಯಾದ ಚಾಮರಾಜನಗರದಿಂದ ಕೇರಳಕ್ಕೆ ಹೋಗಿ ಬರುವವರ ಸಂಖ್ಯೆ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದಿಂದ ಕೇರಳಕ್ಕೆ ತೆರಳಿರುವವರ ಬಗ್ಗೆ ಸಂಪೂರ್ಣ ವಿವರ ನೀಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ ನೀಡಿದ್ದಾರೆ.
ವಯನಾಡು ಜಿಲ್ಲೆಯಲ್ಲಿ ಉಂಟಾದ ಭೂಕುಸಿತದಲ್ಲಿ ಅಂದಾಜು 70 ಜನರು ಸಿಲುಕಿರುವ ಬಗ್ಗೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಪ್ರವಾಸ, ಜೀವನೋಪಾಯ ಹಾಗೂ ಇನ್ನಿತರೆ ಕಾರಣಕ್ಕೆ ತೆರಳಿರುವವರ ಮಾಹಿತಿಯನ್ನು ಅವರ ಕುಟುಂಬಸ್ಥರು ತಿಳಿಸಬೇಕು. ಆಗ ಅವರನ್ನು ಸುರಕ್ಷಿತವಾಗಿ ಕರೆತರಲು ಅಗತ್ಯ ಕ್ರಮ ವಹಿಸುತ್ತೇವೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ತೆರೆದಿರುವ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 08226-223163, 08226-223161, 08226-223160 ಹಾಗೂ ಮೊಬೈಲ್ ಸಂಖ್ಯೆ 9740942901ಗೆ ಕರೆ ಮಾಡಿ ಮಾಹಿತಿ ತಿಳಿಸಲು ಕೋರಲಾಗಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…