ಚಾಮರಾಜನಗರ: ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸಿ ಗೋಪಾಲನ ದರ್ಶನ ಪಡೆದರು.
ಶ್ರಾವಣ ಮಾಸದ ಕೊನೆಯ ಶನಿವಾರವಾದ ಹಿನ್ನೆಲೆಯಲ್ಲಿ ಇಂದು ಗುಂಡ್ಲುಪೇಟೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಬೆಟ್ಟಕ್ಕೆ ತೆರಳಲು ಸುಮಾರು 25ಕ್ಕೂ ಅಧಿಕ ಬಸ್‌ಗಳನ್ನು ನಿಯೋಜನೆ ಮಾಡಲಾಗಿತ್ತು.
ಮೈಸೂರು, ಮಂಡ್ಯ, ಚಾಮರಾಜನನಗರ, ಹಾಸನ ಸೇರಿದಂತೆ ಕೇರಳ ಕಡೆಯಿಂದ ಸಾವಿರಾರು ಮಂದಿ ಸಾರ್ವಜನಿಕರು ಬೆಟ್ಟಕ್ಕೆ ಆಗಮಿಸಿದ್ದರು. ಬೆಳಿಗ್ಗೆ 10 ಗಂಟೆಯಿಂದಲೇ ಅಧಿಕ ಮಂದಿ ಭೇಟಿ ನೀಡಿದ್ದ ಕಾರಣ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕಿಲೋ ಮೀಟರ್‌ಗಟ್ಟಲೇ ಜನರು ಸಾಲುಗಟ್ಟಿ ನಿಲ್ಲುವಂತಾಯಿತು. ಬಳಿಕ ಟಿಕೆಟ್ ಖರೀದಿಸಿ ಬೆಟ್ಟಕ್ಕೆ ತೆರಳಿದರು.
12 ಗಂಟೆ ವೇಳೆಗೆ ದೇವಸ್ಥಾನದಲ್ಲಿ ಅಧಿಕ ಮಂದಿ ಆಗಮಿಸಿದ್ದ ಕಾರಣ ಜನಜಂಗುಳಿ ಏರ್ಪಟ್ಟಿತ್ತು. ಇದರಿಂದ ದೇವಸ್ಥಾನದ ಸುತ್ತಲೂ ಎರಡು ಸಾಲಿನಲ್ಲಿ ನಿಂತ ಸಾರ್ವಜನಿಕರು ಗಂಟೆಗಟ್ಟಲೇ ನಿಂತು ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು.
ಇನ್ನು ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಗೋಪಾಲಸ್ವಾಮಿಗೆ ವಿವಿಧ ಬಗೆಯ ಹೂವು ಹಾಗೂ ತುಳಸಿಯಿಂದ ವಿಶೇಷ ಅಲಂಕಾರ ಮಾಡಿ ಮಹಾ ಮಂಗಳಾರತಿ ನೆರವೇರಿಸಲಾಯಿತು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…