ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ ಪರಾಗಿರುವ ಘಟನೆ ಗುರುವಾರ ರಾತ್ರಿ 10:30ರಲ್ಲಿ ನಡೆದಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಗಾಯಾಳುವನ್ನು ಕರೆದೊಯ್ಯಲಾಗಿದೆ.
ಗುರುವಾರ ರಾತ್ರಿ 10.30 ರ ಸಮಯದಲ್ಲಿ ಜಮೀನಿನಲ್ಲಿ ಅರಿಶಿನ ಬೇಯಿಸಿ ಒಣಗಲು ಹಾಕಿರುವುದನ್ನು ನೋಡಲು ತೆರಳುವಾಗ ಚಿರತೆ ಬೈಕ್ ಮೇಲೆ ತೆರಳುತಿದ್ದ ರಾಜಶೇಖರ ಮುರ್ತಿ ಎಂಬುವವರ ಮೇಲೆ ದಾಳಿ ನಡೆಸಿದೆ, ತಕ್ಷಣ ಬೈಕ್ ನಿಂದ ಬಿದ್ದು ಬೈಕ್ ಹಾರನ್ ಒತ್ತಿ ಹಿಡಿದಿದ್ದು ಶಬ್ದಕ್ಕೆ ಚಿರತೆ ಓಡಿ ಹೋಗಿದೆ ಎಂದು ಗಾಯಾಳು ರೈತ ತಿಳಿಸಿದ್ದಾರೆ.
ಈ ವಿಚಾರವಾಗಿ ಎಸಿಎಫ್ ಸುರೇಶ್ ಕುಮಾರ್ ಮಾತನಾಡಿ, ಡ್ರೋನ್ ಮೂಲಕ ಚಿರತೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸಿಬ್ಬಂದಿಗಳು ಕೂಂಬಿಂಕ್ ಕೂಡ ನಡೆಸುತಿದ್ದಾರೆ. ಬೋನ್ ಕೂಡ ಇರಿಸಲಾಗುವುದು ಗಾಯಗೊಂಡ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಕೊಡಿಸಲಾಗುವುದು ಎಂದರು.
ಈ ಬಗ್ಗೆ ಗ್ರಾಮದ ವಿಜಯ್ ಮಾತನಾಡಿ, ನಮ್ಮ ಗ್ರಾಮದ ಸುತ್ತಮುತ್ತ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದ್ದು ಕೆಲವು ದಿನಗಳಿಂದ ಕುರಿ ಹಾಗೂ ಜಾನುವಾರುಗಳ ಮೆಲೆ ದಾಳಿ ನಡೆಸಿ ಕೊಂದು ಹಾಕಿದೆ. ಕೂಡಲೆ ಅರಣ್ಯ ಇಲಾಖೆ ಕ್ರಮ ವಹಿಸುವಂತೆ ಒತ್ತಾಯಿಸಿದರು.
ಸುದ್ದಿ ವರದಿ : ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…