ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯು ಸ್ಥಳೀಯರಲ್ಲಿ ಭಾರೀ ಭೀತಿ ಹುಟ್ಟಿಸಿದ್ದು, ಎರಡು ದಿನಗಳ ಅಂತರದಲ್ಲೇ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿವೆ.
ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ವಿರುದ್ಧ ಅನ್ನದಾತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿರತೆ ಪದೇ ಪದೇ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬೋನಿಟ್ಟು ಚಿರತೆ ಸೆರೆ ಹಿಡಿಯದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಬಂಡೀಪುರ ಎಸಿಎಫ್ ಸುರೇಶ್ ವಿರುದ್ಧ ರೈತರು ಕಿಡಿಕಾರಿದ್ದಾರೆ.





