ಚಾಮರಾಜನಗರ

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಇಂದು ಬೆಳಿಗ್ಗೆ 11 ಗಂಟೆಯ ವೇಳೆ ಜರುಗಿದೆ.

ಚನ್ನಪಟ್ಟಣ ತಾಲ್ಲೂಕಿನ ಭುವಳ್ಳಿ ಗ್ರಾಮದ ಶ್ರೇಯಸ್(8) ಚಿರತೆ ದಾಳಿಯಿಂದ ಗಾಯಗೊಂಡ ಬಾಲಕನಾಗಿದ್ದಾನೆ.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆಯ ಮೂಲಕ ತೆರಳುವುದು ವಾಡಿಕೆ. ಅದರಂತೆ ಪಾದಯಾತ್ರೆಯ ಮೂಲಕ ಪೊನ್ನಾಚಿ ಕ್ರಾಸ್‌ನಿಂದ ತಲುಪಿ ನಂತರ ಮುಂದೆ ಅರಣ್ಯ ಪ್ರದೇಶದಲ್ಲಿ ತೆರಳುತ್ತಿದ್ದಾಗ ಬಾಲಕನೋರ್ವನ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಪಾದಯಾತ್ರಿಕರು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಗದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊಂಡಿದ್ದ ಬಾಲಕನನ್ನು ಜೊತೆಯಲ್ಲಿದ್ದ ಭಕ್ತಾದಿಗಳು ಬಸ್ಸಿನ ಮೂಲಕ ಮಲೆ ಮಾದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕರಿಗೆ ಒಂದು ಬೃಹತ್ ಗಾತ್ರದ ಚಿರತೆ ಹಾಗೂ ಒಂದು ಚಿಕ್ಕ ಚಿರತೆ ಕಾಣಿಸಿಕೊಂಡಿದೆ. ಪಾದಯಾತ್ರೆಯ ಮೂಲಕ ತೆರಳುತ್ತಿರುವ ಭಕ್ತಾದಿಗಳು ಅರಣ್ಯ ಪ್ರದೇಶ ಮೂಲಕ ಪಾದಯಾತ್ರೆ ಮಾಡುವ ಬದಲು ಮುಖ್ಯ ರಸ್ತೆಯ ಮೂಲಕ ಪಾದಯಾತ್ರೆ ಮಾಡಿದರೆ ಸುರಕ್ಷತೆ ಇರಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಲಕ್ಷಾಂತರ ಭಕ್ತಾದಿಗಳು ಅರಣ್ಯದಲ್ಲಿ ಪಾದಯಾತ್ರೆ ಮಾಡುತ್ತಾರೆಂಬ ಮಾಹಿತಿ ಇದ್ದರೂ ಇನ್ನು ಸಮರ್ಪಕವಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸದೆ ಇರುವುದರಿಂದ ಮತ್ತೊಮ್ಮೆ ಚಿರತೆ ದಾಳಿ ನಡೆಸಿದೆ ಎಂದು ಪ್ರಜ್ಞಾವಂತ ನಾಗರಿಕರು ಆರೋಪಿಸಿದ್ದಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಗಸ್ತು ಮಾಡುವ ಮೂಲಕ ಭಕ್ತಾದಿಗಳಿಗೆ ಸುರಕ್ಷತೆ ಒದಗಿಸುವಂತೆ ಮನವಿ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

2 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

4 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

4 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

4 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

4 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

8 hours ago