Mysore
20
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಘಟನೆಗೆ ಸುಮಾರು 10 ದಿನಗಳು ಕಳೆದರೂ ಚಿರತೆ ಇನ್ನೂ ಸೆರೆಯಾಗಿಲ್ಲ. ಈ ನಡುವೆ ನಾಗಮಲೆ ಗ್ರಾಮದ ಈರಣ್ಣ ಎಂಬುವರಿಗೆ ಸೇರಿದ ಮೇಕೆಯ ಮೇಲೆ ತಡರಾತ್ರಿ ಚಿರತೆ ದಾಳಿ ನಡೆಸಿರುವ ಘಟನೆ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಮೇಕೆಯ ಮೇಲಿನ ದಾಳಿಯನ್ನು ಗಮನಿಸಿದ ಸ್ಥಳೀಯರು ಜೋರಾಗಿ ಕೂಗಾಡುತ್ತಿದ್ದಂತೆ ಚಿರತೆ ಅಲ್ಲಿಂದ ಪರಾರಿಯಾಗಿದೆ. ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬಲೆ ಹಾಗೂ ಕ್ಯಾಮೆರಾಗಳನ್ನು ಅಳವಡಿಸಿ ಕಾರ್ಯಾಚರಣೆ ಮುಂದುವರಿಸಿದ್ದರೂ, ಚಿರತೆ ಸೆರೆಗೆ ಸಿಕ್ಕಿಲ್ಲ ಎಂಬುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಈ ಕುರಿತು ಸ್ಥಳೀಯರು ಮಾತನಾಡಿ, “ಗ್ರಾಮದ ಜನರು ಭಯಭೀತರಾಗಿದ್ದು, ರಾತ್ರಿ ವೇಳೆ ಹೊರಗೆ ಸಂಚರಿಸಲು ಹೆದರುತ್ತಿದ್ದಾರೆ. ಚಿರತೆಯನ್ನು ಶೀಘ್ರ ಸೆರೆಹಿಡಿದು ಗ್ರಾಮಸ್ಥರಿಗೆ ಭದ್ರತೆ ಒದಗಿಸಬೇಕು” ಎಂದು ಆಗ್ರಹಿಸಿದರು.

Tags:
error: Content is protected !!