ಚಾಮರಾಜನಗರ

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ.

ಗುಂಡಾಪುರ ಗ್ರಾಮದ ಚಿನ್ನರಾಜು ಎಂಬುವವರ ಮೇಲೆ ಚಿರತೆ ದಾಳಿ ಮಾಡಿದೆ. ಪ್ರತಿದಿನದಂತೆ ಅವರು ದನ-ಕುರಿ ಮೇಯಿಸಲು ಅರಣ್ಯದಂಚಿಗೆ ತೆರಳಿದ್ದಾಗ ಹಾಡಹಗಲೇ ಚಿರತೆ ದಾಳಿ ಮಾಡಿದೆ.

ಗಾಯಗೊಂಡ ವ್ಯಕ್ತಿ ಜೋರಾಗಿ ಕಿರುಚಿಕೊಂಡ ಪರಿಣಾಮ ಚಿರತೆ ಸ್ಥಳದಿಂದ ಕಾಲ್ಕಿತ್ತಿದೆ. ಚಿರತೆ ದಾಳಿಯಲ್ಲಿ ಚಿನ್ನರಾಜು ಅವರ ಮುಖ ಮತ್ತು ಕೈ ಭಾಗದಲ್ಲಿ ಪರಚಿದ ಗಾಯಗಳಾಗಿವೆ.

ಈ ಘಟನೆಯಿಂದ ದನ ಮತ್ತು ಕುರಿಗಾಹಿಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದು, ಗಾಯಾಳುವನ್ನು ಚಿಕಿತ್ಸೆಗಾಗಿ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆಗೆ ಬೋನು ಅಳವಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

39 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

48 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago