Leopard captured: Villagers relieved.
ಚಾಮರಾಜನಗರ : ಸಮೀಪದ ಹರದನಹಳ್ಳಿ-ಬಂಡಿಗೆರೆ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಬುಧವಾರ ಚಿರತೆ ಸೆರೆಯಾಗಿದೆ.
ಇದರಿಂದಾಗಿ ಈ ಭಾಗದಲ್ಲಿ ತಲೆದೋರಿದ್ದ ಚಿರತೆ ಉಪಟಳ ತಪ್ಪಿದಂತಾಗಿದೆ. ಹಲವಾರು ದಿನಗಳಿಂದಲೂ ಈ ಕಡೆ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಮೂಡಿಸಿತ್ತು. ಜನತೆ ಭಯಭೀತರಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಚಿರತೆ ಸೆರೆಗೆ ಅರಣ್ಯ ಇಲಾಖೆಯವರು ಇತ್ತೀಚೆಗೆ ಬೋನು ಇಟ್ಟಿದ್ದರು. ಬುಧವಾರ ಬೆಳಿಗ್ಗೆ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ವಿಷಯ ತಿಳಿದು ನೂರಾರು ಜನರು ಚಿರತೆಯನ್ನು ನೋಡಲು ಮುಗಿ ಬಿದ್ದಿದ್ದರು. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಯಾಗಿದ್ದ ಚಿರತೆಯನ್ನು ಸುರಕ್ಷಿತವಾಗಿ ಕೊಂಡೊಯ್ದು ಕಾಡಿಗೆ ಬಿಟ್ಟಿದ್ದಾರೆ.
ಚಿತ್ರದುರ್ಗ: ‘ನಾನು ಬರೀ ಖಾಲಿ ಮಾತನಾಡುವ ಗಿರಾಕಿ ಅಲ್ಲ. ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ’ ಎಂದು ಮುಖ್ಯಮಂತ್ರಿ ಡಿ.ಕೆ.…
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ನೈತಿಕ ಹೊಣೆ ಹೊತ್ತು, ತಮ್ಮನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ಶಾಸಕ…
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ…
ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ರೂಪುಗೊಂಡಿರುವ ‘ಮುರಸು’ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ…
ಮೈಸೂರು: ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ…
ಕೆ.ಆರ್.ನಗರ: ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ 25 ವರ್ಷದ ಸುಶ್ಮಿತಾ ಹಾಗೂ ಅವರ ನವಜಾತ ಶಿಶು…