Mysore
20
scattered clouds

Social Media

ಬುಧವಾರ, 12 ಆಗಸ್ಟ್ 2026
Light
Dark

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಬಳಿ ಬಾಲಕನನ್ನು ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದ್ದು, 30 ಕ್ಕೂ ಅಧಿಕ ಮಂದಿ ಈ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಚಿರತೆ ಸೆರೆ ಕಾರ್ಯಾಚರಣೆ ಒಂದೆಡೆಯಾದರೇ ಚಿರತೆಯೊಂದು ಎರಡು ಮೇಕೆಗಳನ್ನು ಹೊತ್ತೊಯ್ದ ಘಟನೆ ಸೋಮವಾರ ರಾತ್ರಿ ನಾಗಮಲೆ ಗ್ರಾಮದಲ್ಲಿ ನಡೆದಿದೆ. ಕುಳಿಯಮ್ಮ ಮತ್ತು ಗೌರಿ ಎಂಬುವರಿಗೆ ಸೇರಿದ ಎರಡು ಮೇಕೆಗಳನ್ನು ಹೊತ್ತೊಯ್ದಿದ್ದು ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ಕೊಟ್ಟು ಸೂಕ್ತ ಕ್ರಮ‌ ಕೈಗೊಳ್ಳುವಂತೆ ಗೌರಿ ಮತ್ತು ಕುಳಿಯಮ್ಮ ಒತ್ತಾಯಿಸಿದ್ದಾರೆ.

 

Tags:
error: Content is protected !!