ಚಾಮರಾಜನಗರ

ಚಿರತೆ ಸಾವು : ವಿಷಪ್ರಶಾನ ಶಂಕೆ

ಚಾಮರಾಜನಗರ : ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರ ಬಳಿ ಚಿರತೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ವಿಷಪ್ರಾಶನ ಶಂಕೆ ವ್ಯಕ್ತವಾಗಿದೆ.

ಮಲೆಮಹದೇಶ್ವರ ವನ್ಯಜೀವಿ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ವಿಷಪ್ರಾಷನದಿಂದ 5 ಹುಲಿಗಳು ಮೃತಪಟ್ಟ ಘಟನೆ ಹಸಿರಿರುವಾಗಲೇ ಚಿರತೆ ಸತ್ತಿರುವುದು ಬೆಳಕಿಗೆ ಬಂದಿದೆ.

ಕ್ವಾರಿ ಸಮೀಪದ ಕಲ್ಲಿನ ಮೇಲೆ 5-6 ವರ್ಷ ವಯಸ್ಸಿನ ಗಂಡು ಚಿರತೆಯ ಕಳೇಬರ ಪತ್ತೆಯಾಗಿದ್ದು ಎರಡು ಮೂರು ದಿನಗಳ ಹಿಂದೆ ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ಚಿರತೆ ಕಳೇಬರ ಪತ್ತೆಯಾಗಿರುವ ಸಮೀಪದಲ್ಲಿಯೇ ಕರು ಹಾಗೂ ನಾಯಿಯ ಕಳೇಬರ ಕೂಡ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಗುರುವಾರ ಸಂಜೆ ಚಿರತೆಯ ಕಳೇಬರವನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಆರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಂಡಿಪುರದ ಶ್ವಾನದಳದಿಂದ ತಪಾಸಣೆ ನಡೆಸಲಾಯಿತು.

ಪಶು ವೈದ್ಯರಾದ ಡಾ.ವಾಸಿಂ, ಡಾ.ಮೂರ್ತಿ ಅವರಿಂದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಚಿರತೆಯ ಕಳೇಬರವನ್ನು ಸುಡಲಾಯಿತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಸ್ಥಳಕ್ಕೆ ಚಾಮರಾಜನಗರ ಅರಣ್ಯ ವೃತ್ತದ ಸಿಸಿಎಫ್ ಹೀರಾಲಾಲ್, ಬಿಆರ್‌ಟಿ ಹುಲಿ ಯೋಜನೆ ನಿರ್ದೇಶಕ ಶ್ರೀಪತಿ, ಎಸಿಎಫ್ ಮಂಜುನಾಥ್, ಪ್ರಾದೇಶಿಕ ಆರಣ್ಯ ವಲಯದ ಆರ್‌ಎಫ್ ಸಂದೀಪ್, ಡಿಆರ್‌ಎಫ್ ಅಮರನಾಥ್, ಸುರೇಶ್, ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಆಂದೋಲನ ಡೆಸ್ಕ್

Recent Posts

ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ : ರಘುನಾಥ್‌ ಚ.ಹ, ಪ್ರಕಾಶ್‌ರಾಜ್‌ ಕೃತಿ ಆಯ್ಕೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…

14 mins ago

ಕೊಲೆ ಪ್ರಕರಣ | ಪವಿತ್ರಾ ಗೌಡಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…

31 mins ago

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ : ತಂದೆ ನೆನೆದು ಸಚಿವ ಖಂಡ್ರೆ ಭಾವುಕ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

2 hours ago

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಐಸಿಸಿ…

2 hours ago

ಕಿಚ್ಚ ಸುದೀಪ್‌ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್‌ ದೂರು: ಕಾರಣ ಇಷ್ಟೇ.!

ಬೆಂಗಳೂರು: ಬಿಗ್‌ಬಾಸ್-‌12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…

2 hours ago

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದ್ದು, ಜೂನ್.‌30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…

3 hours ago