ಚಾಮರಾಜನಗರ

ಚಿರತೆ ಸಾವು : ವಿಷಪ್ರಶಾನ ಶಂಕೆ

ಚಾಮರಾಜನಗರ : ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರ ಬಳಿ ಚಿರತೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ವಿಷಪ್ರಾಶನ ಶಂಕೆ ವ್ಯಕ್ತವಾಗಿದೆ.

ಮಲೆಮಹದೇಶ್ವರ ವನ್ಯಜೀವಿ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ವಿಷಪ್ರಾಷನದಿಂದ 5 ಹುಲಿಗಳು ಮೃತಪಟ್ಟ ಘಟನೆ ಹಸಿರಿರುವಾಗಲೇ ಚಿರತೆ ಸತ್ತಿರುವುದು ಬೆಳಕಿಗೆ ಬಂದಿದೆ.

ಕ್ವಾರಿ ಸಮೀಪದ ಕಲ್ಲಿನ ಮೇಲೆ 5-6 ವರ್ಷ ವಯಸ್ಸಿನ ಗಂಡು ಚಿರತೆಯ ಕಳೇಬರ ಪತ್ತೆಯಾಗಿದ್ದು ಎರಡು ಮೂರು ದಿನಗಳ ಹಿಂದೆ ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ಚಿರತೆ ಕಳೇಬರ ಪತ್ತೆಯಾಗಿರುವ ಸಮೀಪದಲ್ಲಿಯೇ ಕರು ಹಾಗೂ ನಾಯಿಯ ಕಳೇಬರ ಕೂಡ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಗುರುವಾರ ಸಂಜೆ ಚಿರತೆಯ ಕಳೇಬರವನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಆರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಂಡಿಪುರದ ಶ್ವಾನದಳದಿಂದ ತಪಾಸಣೆ ನಡೆಸಲಾಯಿತು.

ಪಶು ವೈದ್ಯರಾದ ಡಾ.ವಾಸಿಂ, ಡಾ.ಮೂರ್ತಿ ಅವರಿಂದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಚಿರತೆಯ ಕಳೇಬರವನ್ನು ಸುಡಲಾಯಿತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಸ್ಥಳಕ್ಕೆ ಚಾಮರಾಜನಗರ ಅರಣ್ಯ ವೃತ್ತದ ಸಿಸಿಎಫ್ ಹೀರಾಲಾಲ್, ಬಿಆರ್‌ಟಿ ಹುಲಿ ಯೋಜನೆ ನಿರ್ದೇಶಕ ಶ್ರೀಪತಿ, ಎಸಿಎಫ್ ಮಂಜುನಾಥ್, ಪ್ರಾದೇಶಿಕ ಆರಣ್ಯ ವಲಯದ ಆರ್‌ಎಫ್ ಸಂದೀಪ್, ಡಿಆರ್‌ಎಫ್ ಅಮರನಾಥ್, ಸುರೇಶ್, ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಆಂದೋಲನ ಡೆಸ್ಕ್

Recent Posts

ಯುವನಿಧಿ; ೨,೧೭೯ ಮಂದಿಗೆ ೬.೩೦ ಕೋಟಿ ರೂ. ನೆರವು

ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ  ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…

5 mins ago

ವೈಟ್ ಟಾಪಿಂಗ್: ಅ.೫ರೊಳಗೆ ಮೂರು ರಸ್ತೆ ಸಂಚಾರಕ್ಕೆ ಮುಕ್ತ

ಕೆ.ಬಿ.ರಮೇಶನಾಯಕ ಮೊದಲ ಹಂತದ ಮೂರು ರಸ್ತೆಗಳಲ್ಲಿ ಎರಡು ಪೂರ್ಣ ರಸ್ತೆ ಜತೆಗೆ ಫುಟ್‌ಪಾತ್, ಚರಂಡಿ ಕಾಮಗಾರಿಯೂ ಪೂರ್ಣ ದಸರಾ ಬಳಿಕ…

11 mins ago

ಮಂಡ್ಯ | ಕೆರೆಯಲ್ಲಿ ಬಾಲಕನ ಶವ ಪತ್ತೆ ; ಕೊಲೆ ಶಂಕೆ

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…

10 hours ago

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

15 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

16 hours ago