ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಆಹಾರಕ್ಕಾಗಿ ಮುಳ್ಳುಹಂದಿಯ ಮೇಲೆರಗಿದ ಚಿರತೆಯ ಎದೆಭಾಗಕ್ಕೆ ಹಂದಿಯ ತೀಕ್ಷ್ಣವಾದ ಮುಳ್ಳುಗಳು ಬಲವಾಗಿ ಚುಚ್ಚಿದ್ದರಿಂದ ತೀವ್ರ ರಕ್ತಸ್ರಾವ ಹಾಗೂ ಗಾಯಗೊಂಡ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ.

ಹಸಿದಿದ್ದ ಚಿರತೆಯು ಆಹಾರಕ್ಕಾಗಿ ಮುಳ್ಳುಹಂದಿ ಬೇಟೆಯಾಡಲು ಪ್ರಯತ್ನಿಸಿದೆ. ಮುಳ್ಳುಹಂದಿಯ ದೇಹದಲ್ಲಿದ್ದ ಮುಳ್ಳು ಚಿರತೆಯ ಎದೆಭಾಗಕ್ಕೆ ಚುಚ್ಚಿದೆ. ಗಂಭೀರವಾಗಿ ಗಾಯಗೊಂಡ ಚಿರತೆ ತೀವ್ರ ಅಸ್ವಸ್ಥಗೊಂಡು ಸ್ಥಳದಲ್ಲೇ ಮೃತಪಟ್ಟಿವೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.

 

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

1 hour ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

1 hour ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

1 hour ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

1 hour ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

1 hour ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

1 hour ago