ಚಾಮರಾಜನಗರ

ಮ.ಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆಯ ಸಂಚಾರಕ್ಕೆ ಕೋರಿಕೆ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮಹದೇಶ್ವರ ಬೆಟ್ಟ ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡುವಿನ ತಡೆಗೋಡೆ ಮೇಲೆ ರಾತ್ರಿಯ ವೇಳೆ ಒಂದು ಚಿರತೆ ಅದರ ಎರಡು ಚಿರತೆ ಮರಿಗಳ ಜತೆ ಕುಳಿತಿದ್ದನ್ನು ಅದೇ ಮಾರ್ಗದಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್‌ನಲ್ಲಿ ಇದ್ದ ಭಕ್ತಾದಿಗಳು ಗಮನಿಸಿದ್ದಾರೆ. ತಕ್ಷಣವೇ ಮೊಬೈಲ್‌ನಲ್ಲಿ ಆ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಭಾಗದಲ್ಲಿ ಇತ್ತೀಚಿಗೆ ರಾತ್ರಿಯ ಸಂದರ್ಭದಲ್ಲಿ ಚಿರತೆ ಸಂಚಾರ ಹೆಚ್ಚಾಗಿದ್ದು ಸಂಚರಿಸುವಂತಹ ವಾಹನ ಸಾವಿರಾರು ಎಚ್ಚರಿಕೆಯಿಂದ ಸಂಚರಿಸುವಂತೆ ಸ್ಥಳೀಯರು ಕೋರಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ…

39 mins ago

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

2 hours ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

2 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

3 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

3 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

3 hours ago