ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮಹದೇಶ್ವರ ಬೆಟ್ಟ ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡುವಿನ ತಡೆಗೋಡೆ ಮೇಲೆ ರಾತ್ರಿಯ ವೇಳೆ ಒಂದು ಚಿರತೆ ಅದರ ಎರಡು ಚಿರತೆ ಮರಿಗಳ ಜತೆ ಕುಳಿತಿದ್ದನ್ನು ಅದೇ ಮಾರ್ಗದಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್‌ನಲ್ಲಿ ಇದ್ದ ಭಕ್ತಾದಿಗಳು ಗಮನಿಸಿದ್ದಾರೆ. ತಕ್ಷಣವೇ ಮೊಬೈಲ್‌ನಲ್ಲಿ ಆ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಭಾಗದಲ್ಲಿ ಇತ್ತೀಚಿಗೆ ರಾತ್ರಿಯ ಸಂದರ್ಭದಲ್ಲಿ ಚಿರತೆ ಸಂಚಾರ ಹೆಚ್ಚಾಗಿದ್ದು ಸಂಚರಿಸುವಂತಹ ವಾಹನ ಸಾವಿರಾರು ಎಚ್ಚರಿಕೆಯಿಂದ ಸಂಚರಿಸುವಂತೆ ಸ್ಥಳೀಯರು ಕೋರಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…