Mysore
26
overcast clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ ಸೃಷ್ಟಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ಈ ದೃಶ್ಯವನ್ನು ತಮ್ಮ ಮೊಬೈಲ್‌ ಕ್ಯಾಮರಾವನ್ನು ಸೆರೆ ಹಿಡಿದಿದ್ದಾರೆ.

ಶಿವರಾತ್ರಿ ಜಾತ್ರೆ ಮುಕ್ತಾಯದ ಬೆನ್ನಲ್ಲೇ ಚಿರತೆ ಕಾಣಿಸಿಕೊಂಡಿರುವುದು ಪಾದಯಾತ್ರಿಗಳ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಿಸಿದ್ದು, ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ಸವಾರರು ಚಿರತೆಯನ್ನು ಕಂಡು ತಮ್ಮ ಮೊಬೈಲ್‌ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಜಾತ್ರೆ ಮುಕ್ತಾಯವಾಗಿರುವುದರಿಂದ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಬರುವ ಭಕ್ತರ ರಕ್ಷಣೆ ಹಾಗೂ ಅವರಿಗೆ ಜಾಗೃತಿ ಮೂಡಿಸುವುದು ಈಗ ಆದ್ಯತೆಯಾಗಿದೆ ಎಂದು ಹೇಳಲಾಗುತ್ತಿದೆ.

Tags:
error: Content is protected !!