ಚಾಮರಾಜನಗರ

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು

ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ ಚಿರತೆಯೊಂದು ನಿರ್ಭಯವಾಗಿ ಓಡಾಡಿದ್ದು, ಮನೆಯಲ್ಲಿ ವಾಸ ಮಾಡುವ ಕುಟುಂಬದಲ್ಲಿ ಆತಂಕ ಎದುರಾಗಿದೆ.

ಶಿವಪುರ ಗ್ರಾಮದ ರೈತ ಸಿದ್ದಮಲ್ಲಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ನಿರ್ಭೀತಿಯಿಂದ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರೈತ ಸಿದ್ಧಮಲ್ಲಪ್ಪ ಅವರು ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ತೋಟದ ಮನೆಯಲ್ಲಿ ವಾಸವಾಗಿದ್ದು, ಚಿರತೆ ಓಡಾಟದಿಂದ ತೀವ್ರ ಆತಂಕಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

52 mins ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

54 mins ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

56 mins ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

58 mins ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

1 hour ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

1 hour ago