ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಸದಸ್ಯರಾಗಿದ್ದ ಧೃವನಾರಾಯಣ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಮೂಲಕ ಜನರ ಪ್ರೀತಿ ವಿಶ್ವಾಸವನ್ನು ಸಂಪಾದಿಸಿದ್ದಾರೆ.
ಸಂಸದರಾಗಿ ಇಡೀ ದೇಶದಲ್ಲೇ ನಂ.೧ ಸ್ಥಾನ ಪಡೆದಿದ್ದವರು ಧೃವನಾರಾಯಣ್. ಅದೇ ರೀತಿಯ ಹೆಸರನ್ನು ಸುನಿಲ್ ಬೋಸ್ ಅವರು ಗಳಿಸಬೇಕು ಎಂಬುದು ನಮ್ಮೆಲ್ಲ ಇಚ್ಚೆ ಎಂದು ಅಭಿಪ್ರಾಯ ತಿಳಿಸಿದರು.
ಚಾಮರಾಜನಗರದ ೮ ವಿಧಾನಸಭಾ ಕ್ಷೇತ್ರದಲ್ಲಿ ೭ರಲ್ಲಿ ನಮ್ಮ ಪಕ್ಷದ ಶಾಸಕರಿದ್ದಾರೆ. ಹನೂರಿನಲ್ಲಿ ಮಾತ್ರ ರವೀಂದ್ರ ಸೋತರು. ಆದರೆ ಈ ಬಾರಿ ಹನೂರಿನಲ್ಲೂ ಬಹುಮತ ಸಿಗುತ್ತದೆ ಎಂಬ ವಿಶ್ವಾಸ ಇದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಸುನಿಲ್ ಬೋಸ್ ಮೂರು ಲಕ್ಷ ಮತಗಳ ಅಂತರದಿಂದ ಗೆದ್ದು ಲೋಕಸಭೆಗೆ ಪ್ರವೇಶ ಮಾಡುವ ಮೂಲಕ ರಾಜಕೀಯ ಪ್ರಾರಂಭ ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.
ಈ ವೇಳೆ ಬೃಹತ್ ರ್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸುನಿಲ್ ಬೋಸ್ ಜತೆಗಿದ್ದರು
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…