ಚಾಮರಾಜನಗರ

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ನಗರ ಸನಿಹದ ಮಲ್ಲಯ್ಯನಪುರ ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತ್ತುಗೊಳಿಸಲು ಹಾಗೂ ವಿವಿಧ ಇಲಾಖೆಗಳ ನಾಲ್ವರು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ.

ಮಲ್ಲಯ್ಯನಪುರ ಗ್ರಾಮದ ಕ್ವಾಲಿಟಿ ನ್ಯಾಯಬೆಲೆ ಅಂಗಡಿ ವಿತರಕರಾದ ಮಲ್ಲೇದೇವರು ಅವರು ಆಹಾರ ಪದಾರ್ಥವನ್ನು ಪಡಿತರದಾರರಿಗೆ ಸಮರ್ಪಕವಾಗಿ ವಿತರಣೆ ಮಾಡದಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ವಿಚಾರಣೆ ಕಾಯ್ದಿರಿಸಿ ಪರವಾನಗಿಯನ್ನು ಇಲಾಖೆ ಉಪನಿರ್ದೇಶಕರು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ಲತಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಆದೇಶಿಸಿದ್ದಾರೆ. ಆಯೋಗದ ಶಿಫಾರಸು ಆಧರಿಸಿ ಈ ಕ್ರಮ ವಹಿಸಲಾಗಿದೆ.

ಇದೇ ರೀತಿ, ಆಹಾರ ದಾಸ್ತಾನು ವ್ಯತ್ಯಾಸ, ವಹಿಗಳನ್ನು ನಿರ್ವಹಿಸದಿರುವುದು, ಇನ್ನಿತರ ನ್ಯೂನತೆಗಳ ಕಾರಣದಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಓರ್ವ ಹಾಸ್ಟೆಲ್ ವಾರ್ಡನ್, ಸರ್ಕಾರಿ ಶಾಲೆಯ ಮಧ್ಯಾಹ್ನದ ಬಿಸಿಯೂಟ ನಿರ್ವಹಣೆಗೆ ಸಂಬಂಽಸಿದಂತೆ ಓರ್ವರು, ಪೌಷ್ಟಿಕ ಆಹಾರವನ್ನು ಕೆಲ ಫಲಾನುಭವಿಗಳಿಗೆ ನೀಡದೆ ವಿತರಣೆ ಮಾಡಲಾಗಿದೆ ಎಂದು ಪುಸ್ತಕದಲ್ಲಿ ನಮೂದಿಸಿರುವ ಓರ್ವ ಅಂಗನವಾಡಿ ಕಾರ್ಯಕರ್ತೆ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲು ಸೂಚಿಸಲಾಗಿದೆ. ತಮ್ಮ ಶಿಫಾರಸು ಆಧರಿಸಿ ಕಡ್ಡಾಯ ರಜೆಯಂತಹ ಕ್ರಮವನ್ನು ಅಽಕಾರಿಗಳು ವಹಿಸಲಿದ್ದಾರೆ ಎಂದು ನಗರದಲ್ಲಿ ಬುಧವಾರ ಅಽಕಾರಿಗಳ ಸಭೆ ನಂತರ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಸುದ್ದಿಗಾರರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಜಿಪಂ ಸಿಇಒ ಮೋನಾ ರೋತ್, ಆಹಾರ ಆಯೋಗದ ಸದಸ್ಯರಾದ ಲಿಂಗರಾಜು ಕೋಟೆ, ಸುಮಂತ್‌ರಾವ್, ಕೆ.ಎಸ್.ವಿಜಯಲಕ್ಷ್ಮಿ, ಎ.ರೋಹಿಣಿಪ್ರಿಯ, ಮಾರುತಿ ದೊಡ್ಡಣ್ಣನವರ್, ಆಹಾರ ಉಪನಿರ್ದೇಶಕರಾದ ವಸುಂಧರಾ ಹೆಗಡೆ, ಇತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

9 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

9 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

9 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

9 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

9 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

10 hours ago