ಚಾಮರಾಜನಗರ

ಲೋಕಸಭೆ : ಮತದಾನಕ್ಕೆ ಸಕಲ ಸಿದ್ಧತೆ !

  • ಕ್ಷೇತ್ರದಲ್ಲಿ ಒಟ್ಟು ೧೭,೭೮,೩೧೦ ಮತದಾರರು : ೨ ಸಾವಿರ ಮತಗಟ್ಟೆಗಳ ಸ್ಥಾಪನೆ.

ಚಾಮರಾಜನಗರ: ಚಾ.ನಗರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಏ.೨೬ ರಂದು ಬೆಳಿಗ್ಗೆ ೭ ರಿಂದ ಸಂಜೆ ೬ ಗಂಟೆ ತನಕ ಮತದಾನ ನಡೆಯಲಿದ್ದು, ಚುನಾವಣೆ ಆಯೋಗ ಮತ್ತು ವಿವಿಧ ಇಲಾಖೆಗಳ ಸಮನ್ವತೆಯೊಂದಿಗೆ ಜಿಲ್ಲಾಡಳಿತವು ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ೧೭,೭೮,೩೧೦ ಮತದಾರರಿದ್ದಾರೆ. ಇವರಲ್ಲಿ ೮,೭೮,೭೦೨ ಪುರುಷ, ೮,೯೯,೫೦೧ ಮಹಿಳಾ ಮತದಾರರು. ೧೦೭ ಇತರೆ ಹಾಗೂ ೩೫೭ ಸೇವಾ ಮತದಾರರಿದ್ದಾರೆ. ಇವರಲ್ಲಿ ೩೪೪ ಪುರುಷ ಮತ್ತು ೧೩ ಮಹಿಳಾ ಮತದಾರರು. ಕ್ಷೇತ್ರದಲ್ಲಿ ಒಟ್ಟು ೧೪ ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದಾರೆ. ಇವರಲ್ಲಿ ೧೩ ಪುರುಷರು ಮತ್ತು ಒಬ್ಬ ಮಹಿಳಾ ಅಭ್ಯರ್ಥಿಯಾಗಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ಷೇತ್ರಾದ್ಯಂತ ಒಟ್ಟು ೨ ಸಾವಿರ ಮತಗಟ್ಟೆಗಳನ್ನು ತೆರೆಯಲಾಗುತ್ತದೆ. ನಗರ ಪ್ರದೇಶದಲ್ಲಿ ೨೬೩ ಮತ್ತು ಗ್ರಾಮೀಣ ಪ್ರದೇಶದಲ್ಲಿ ೧,೭೩೭ ಮತಗಟ್ಟೆಗಳು ಇರಲಿವೆ. ಮಹಿಳೆಯರು ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಜಿಲ್ಲೆಯ ೪ ಕ್ಷೇತ್ರಗಳಲ್ಲಿ ಒಟ್ಟು ೧೬ ಸಖಿ ಮತಗಟ್ಟೆ ಸ್ಥಾಪಿಸಲಾಗುತ್ತದೆ ಎಂದರು.

ಇದಲ್ಲದೆ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರದಲ್ಲಿ ೨ ಸಾಂಪ್ರದಾಯಿಕ ಬುಡಕಟ್ಟು ಮತಗಟ್ಟೆ, ವಿಶೇಷ ಚೇತನರಿಗೆ ೪ ಕ್ಷೇತ್ರಗಳಲ್ಲಿ ತಲಾ ಒಂದೊಂದು ಮತಗಟ್ಟೆ ಪ್ರಾರಂಭಿಸಲಾಗುತ್ತದೆ. ಜೊತೆಗೆ ನಾಲ್ವರು ಭಾಷಾ ಅನುವಾದಕರನ್ನು ನೇಮಿಸಲಾಗಿದೆ ಎಂದರು.

ಜಿಲ್ಲೆಯ ೪ ಕ್ಷೇತ್ರಗಳಲ್ಲಿ ಯುವ ಮತದಾರರು ಹೆಚ್ಚಾಗಿರುವ ಪ್ರದೇಶಗಳನ್ನು ಗುರುತಿಸಿ ತಲಾ ೨ ಯುವ ಸೌರಭ ಮತಗಟ್ಟೆಗಳನ್ನು ತೆರೆಯಲಾಗಿದೆ. ಸಾಂಸ್ಕೃತಿಕ ಕಲೆಗಳ ಮಹತ್ವ ತಿಳಿಸಲು ೨ ಪಾರಂಪರಿಕ ಮತಗಟ್ಟೆ ಸ್ಥಾಪಿಸಲಾಗುತ್ತದೆ ಎಂದರು.

ಇದಲ್ಲದೆ ರೈತರ ಮಹತ್ವ ಸಾರುವ ೮ ಅನ್ನದಾತ ಮತಗಟ್ಟೆ, ಅರಣ್ಯದ ಮಹತ್ವ ಹೇಳುವ ೬ ಹಸಿರು ಮತಗಟ್ಟೆಗಳನ್ನು ಆರಂಭಿಸಲಾಗುತ್ತದೆ. ಕ್ಷೇತ್ರಾದ್ಯಂತ ೨ ಸಾವಿರ ಬ್ಯಾಲೆಟ್ ಯೂನಿಟ್, ೨ ಸಾವಿರ ಕಂಟ್ರೋಲ್ ಯೂನಿಟ್, ೨ ಸಾವಿರ ವಿ.ವಿ.ಪ್ಯಾಟ್‌ಗಳನ್ನು ಬಳಸಲಾಗುವುದು ಎಂದು ವಿವರಿಸಿದರು.

ಮತದಾರರ ಸಹಾಯವಾಣಿ ೧೯೫೦ಕ್ಕೆ ಏ.೨೧ರವರೆಗೆ ಮತದಾರರ ಪಟ್ಟಿ, ಭಾವಚಿತ್ರವಿರುವ ಗುರುತಿನ ಚೀಟಿ ಸಂಬಂಧ ೩೮೩ ಕರೆಗಳು ಬಂದಿದ್ದವು. ಇವುಗಳಲ್ಲಿ ೧೦ ದೂರುಗಳು ಮಾತ್ರ ಬಾಕಿಯಿದ್ದು ಉಳಿದವನ್ನು ಇತ್ಯರ್ಥ ಮಾಡಲಾಗಿದೆ. ಸಿವಿಜಿಲ್ ಮೊಬೈಲ್ ಆಪ್‌ಗೆ ಏ.೨೧ ರವರೆಗೆ ೧೦೨೭ ದೂರುಗಳು ಬಂದಿದ್ದವು. ೬೯೫ ಅನ್ನು ಪರಿಹರಿಸಲಾಗಿದೆ ಎಂದರು.

ಬಂದೋಬಸ್ತ್‌ಗೆ ೧೬೬೭ ಪೊಲೀಸರು: ಜಿಲ್ಲೆಯಲ್ಲಿರುವ ೯೮೩ ಮತಗಟ್ಟೆಗಳ ಪೈಕಿ ೧೯೭ ಅನ್ನು ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಮತದಾನವನ್ನು ನ್ಯಾಯಯುತ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾದ್ಯಂತ ಒಟ್ಟು ೧,೬೬೭ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು.

ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸ್ಪಿ ಪದ್ಮಿನಿ ಸಾಹು, ಎಡಿಸಿ ಗೀತಾ ಹುಡೇದ ಹಾಜರಿದ್ದರು.

ಏ.೨೫ರಂದು ಕ್ಷೇತ್ರದ ಪಟ್ಟಣಗಳಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕಾರ್ಯ ನಡೆಯಲಿದೆ. ಜೂನ್ ೪ ರಂದು ಬೆಳಿಗ್ಗೆ ೮ ರಿಂದ ಚಾ.ನಗರದ ಹೊರವಲುಂದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

    – ಸಿ.ಟಿ.ಶಿಲ್ಪಾ ನಾಗ್

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

8 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

8 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

9 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

9 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

10 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

11 hours ago