ಚಾಮರಾಜನಗರ: ನಿನ್ನೆ ( ಏಪ್ರಿಲ್ 26 ) ರಾಜ್ಯದ ಒಟ್ಟು 14 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಿತು. ಎಲ್ಲೆಡೆ ಮತದಾನ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಗೆ ಬರುವ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಹಾಕಿದ್ದ ಗ್ರಾಮಸ್ಥರು ಇವಿಎಂ ಧ್ವಂಸ ಮಾಡಿದ್ದರು.
ಮತಗಟ್ಟೆ ಧ್ವಂಸ ಮಾಡಿದ್ದ ಗ್ರಾಮಸ್ಥರು ಕುರ್ಚಿ ಹಾಗೂ ಮೇಜುಗಳನ್ನು ಸಹ ಒಡೆದು ಹಾಕಿದ್ದರು. ಹೀಗೆ ಪರಿಸ್ಥಿರಿ ವಿಕೋಪಕ್ಕೆ ತಿರುಗಿದ್ದನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಈ ವೇಳೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಚುನಾವಣಾಧಿಕಾರಿಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದರು.
ಹೀಗೆ ಹಿಂಸೆ ಏರ್ಪಟ್ಟಿದ್ದ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ನಡೆಸಲು ಚುನಾವಣಾಧಾರಿಗಳು ತೀರ್ಮಾನಿಸಿದ್ದಾರೆ. ಏಪ್ರಿಲ್ 29ರಂದು ಬೂತ್ ಸಂಖ್ಯೆ 146ರಲ್ಲಿ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…