ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಗ್ರಾಮಸ್ಥರು ಮತಗಟ್ಟೆಗೆ ನುಗ್ಗಿ ಇವಿಎಂ ಒಡೆದು ಹಾಕಿದ ಘಟನೆ ನಡೆದಿದೆ.
ಇಂಡಿಗನತ್ತ, ಪಡಸಲಗತ್ತ, ತುಳಸಿಕೆರೆ, ಮೆಂದಾರೆ ಮತ್ತು ತೇಕಣೆ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಮತದಾನವನ್ನು ಬಹಿಷ್ಕರಿಸಲಾಗಿತ್ತು. ಈ ಕುರಿತು ಹಿಂದೆಯೇ ಎಚ್ಚರಿಕೆಯನ್ನು ನೀಡಿದ್ದ ಗ್ರಾಮಸ್ಥರು ಇಂದು ಮತಗಟ್ಟೆಯಲ್ಲಿದ್ದ ಮೇಜು, ಕುರ್ಚಿಯನ್ನು ಧ್ವಂಸ ಮಾಡಿ ಮತಯಂತ್ರವನ್ನು ಒಡೆದು ಹಾಕಿದ್ದಾರೆ.
ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳ ಮೇಲೂ ಸಹ ಹಲ್ಲೆ ಮಾಡಿದ್ದಾರೆ.
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ…
ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.…