Mysore
30
scattered clouds

Social Media

ಬುಧವಾರ, 27 ಮೇ 2026
Light
Dark

ಡ್ರೈವಿಂಗ್ ವೇಳೆ ಹೃದಯಾಘಾತ : ಲಾರಿ ಚಾಲಕ ಸಾವು

ಚಾಮರಾಜನಗರ : ಲಾರಿ ಡ್ರೈವಿಂಗ್ ವೇಳೆ ಹೃದಯಾಘಾತವಾದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ.‌

ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿದೆ. ಇದರಿಂದಾಗಿ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ, ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದಿದ್ದಾನೆ. ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಬೇಗೂರು ಪೊಲೀಸರು ಮುಂದಿನ ಕ್ರಮ‌ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!