ಚಾಮರಾಜನಗರ : ಲಾರಿ ಡ್ರೈವಿಂಗ್ ವೇಳೆ ಹೃದಯಾಘಾತವಾದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ.
ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿದೆ. ಇದರಿಂದಾಗಿ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ, ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದಿದ್ದಾನೆ. ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಬೇಗೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…