Love Failure young man commits suicide
ಚಾಮರಾಜನಗರ : ಪ್ರೀತಿಸಿದ ಹುಡುಗಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.
24 ವರ್ಷದ ಸಂತೋಷ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.
ಸಂತೋಷ್ ಹಾಗೂ ಸಾಗಡೆ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಆಕೆ ಬೇರೊಬ್ಬ ಯುವಕನಿಗೆ ಮೆಸೇಜ್ ಮಾಡುತ್ತಿದ್ದಳು. ಇದನ್ನು ಪ್ರಶ್ನಿಸಿದ ಸಂತೋಷ್‌ನಿಂದ ಯುವತಿ ಕೆಲ ದಿನಗಳಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ.
ಇದರಿಂದ ತೀವ್ರ ಮನನೊಂದಿದ್ದ ಸಂತೋಷ್, ನನ್ನ ಸಾವಿಗೆ ಆಕೆಯೇ ಕಾರಣ ಎಂದು ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ಹಾಕಿದ್ದ. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…